Select Your Language

Notifications

webdunia
webdunia
webdunia
webdunia

ಏಕಾಏಕಿ ವಾಲ್ ಓಪನ್ : ಸ್ವಲ್ಪದರಲ್ಲೇ ತಪ್ಪಿತು ಗ್ಯಾಸ್ ಟ್ಯಾಂಕರ್ ಅನಾಹುತ

ಏಕಾಏಕಿ ವಾಲ್ ಓಪನ್ : ಸ್ವಲ್ಪದರಲ್ಲೇ ತಪ್ಪಿತು ಗ್ಯಾಸ್ ಟ್ಯಾಂಕರ್ ಅನಾಹುತ
ಮಂಗಳೂರು , ಸೋಮವಾರ, 4 ನವೆಂಬರ್ 2019 (18:49 IST)
ಅನಿಲ ಟ್ಯಾಂಕರೊಂದರ ಮೇಲ್ಭಾಗದ ವಾಲ್ ಏಕಾಏಕಿ ಓಪನ್ ಆದ ಘಟನೆ ನಡೆದಿದೆ.

ವಾಲ್ ಓಪನ್ ಆಗಿ ಭಾರೀ ಪ್ರಮಾಣದಲ್ಲಿ ಅನಿಲ ಸೋರಿಕೆಯಾಗಿ ಸ್ಥಳದಲ್ಲಿ ಆತಂಕ ಮೂಡಿಸಿದ ಘಟನೆ ಉಪ್ಪಿನಂಗಡಿ ಬಳಿಯ ಕರ್ವೇಲ್ ನಲ್ಲಿ ನಡೆದಿದೆ.

ಮಂಗಳೂರಿನಿಂದ ಹಾಸನ ಕಡೆ ಹೊರಟಿದ್ದ ಟೋಟಲ್ ಗ್ಯಾಸ್ ಕಂಪನಿಯ ಅನಿಲ ಟ್ಯಾಂಕರ್ ನ ಮೇಲ್ಭಾಗದ ವಾಲ್ ಕರ್ವೇಲ್ ಬಳಿ ಏಕಾಏಕಿ ತೆರೆದುಕೊಂಡಿತ್ತು. ಈ ಸಂದರ್ಭ ರಭಸದಿಂದ ನೀರು ಚಿಮ್ಮುವ ಶೈಲಿಯಲ್ಲಿ ಗ್ಯಾಸ್ ಮೇಲ್ಭಾಗಕ್ಕೆ ಚಿಮ್ಮಿ, ಗಾಳಿಯೊಂದಿಗೆ ಬೆರೆತು ಆವಿಯಾಗತೊಡಗಿತ್ತು.

ಕೂಡಲೇ ಕರ್ವೇಲ್ ಮಸೀದಿಯಿಂದ ಮೈಕ್ ಅನೌನ್ಸ್ ಮಾಡಿ ಪರಿಸರದಲ್ಲಿ ಬೆಂಕಿ ಉರಿಸದಂತೆ ಮುನ್ನೆಚ್ಚರಿಕೆ ನೀಡಲಾಯಿತು. ಪರಿಸರದ ಮನೆಯವರನ್ನು ಸ್ಥಳಾಂತರಗೊಳಿಸಲಾಯಿತು. ಇಕ್ಕೆಲಗಳಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಲಾಯಿತು. 

ಸುದ್ದಿ ತಿಳಿದು ಉಪ್ಪಿನಂಗಡಿ ಪೊಲೀಸರು, ತುರ್ತು ಅನಿಲ ಸೋರಿಕೆ ಕಾರ್ಯಾಚರಣೆ ದಳದವರು ಸ್ಥಳಕ್ಕೆ ಧಾವಿಸಿದ್ರು.  ಸುಮಾರು ಒಂದೂವರೆ ಗಂಟೆಗಳ ಶ್ರಮದ ಬಳಿಕ ಗ್ಯಾಸ್ ಸೋರಿಕೆ ತಡೆಗಟ್ಟಿದರು. 




Share this Story:

Follow Webdunia kannada

ಮುಂದಿನ ಸುದ್ದಿ

ಎಲ್ಲರೂ ಒಟ್ಟಾಗಿ ಮದ್ಯ ನಿಷೇಧದ ಬಗ್ಗೆ ಧ್ವನಿ ಎತ್ತಬೇಕು- ಸಚಿವ ಸಿಟಿ ರವಿ ಕರೆ