Webdunia - Bharat's app for daily news and videos

Install App

ಶಾಲೆಯ ನೀರಿನ ಟ್ಯಾಂಕ್ಗೆ ವಿಷ ಬೆರೆಸಿದ ದುಷ್ಕರ್ಮಿಗಳು! ಮುಂದೇನಾಯ್ತು?

Webdunia
ಬುಧವಾರ, 8 ಡಿಸೆಂಬರ್ 2021 (12:28 IST)
ಮಡಿಕೇರಿ : ದುಷ್ಕರ್ಮಿಗಳು ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ಘಟನೆ ನಡೆದಿದೆ.
ಮಡಿಕೇರಿ ತಾಲೂಕಿನ ಸುಂಟಿಕೊಪ್ಪದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ಗೆ ದುಷ್ಕರ್ಮಿಗಳು ವಿಷಕಾರಿ ರಾಸಾಯನಿಕ ಬೆರೆಸಿದ್ದು, ಶಾಲೆಯ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಎಲ್ಲಾ ಮಕ್ಕಳು ಸುರಕ್ಷತವಾಗಿದ್ದಾರೆ.
ಈ ಸಂಬಂಧ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದ್ದು ಸುಂಟಿಕೊಪ್ಪ ಪೊಲೀಸರು ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಬೆಳಗ್ಗೆ ಶೌಚಾಲಯ ಸ್ವಚ್ಛಗೊಳಿಸುವಾಗ ಪ್ರಕರಣ ಬೆಳಕಿಗೆ ಬಂದಿದೆ. ಲತಾ, ಶೌಚಾಲಯ ಸ್ವಚ್ಚಗೊಳಿಸಲು ಹೋದಾಗ ನೀರಿನ ಓವರ್‌ಟ್ಯಾಂಕ್ನ ಮುಚ್ಚಳ ತೆರೆದಿದ್ದು, ಟ್ಯಾಂಕ್‌ನಿಂದ ದುರ್ವಾಸನೆ ಬರುತ್ತಿರುವುದು ಕಂಡು ಬಂದಿದೆ. ಸದ್ಯ ಲತಾ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಇದಾದ ಬಳಿಕ ಶಾಲಾ ಸಿಬ್ಬಂದಿಯಿಂದ ಸುಂಟಿಕೊಪ್ಪ ಪೊಲೀಸ್ ಠಾಣೆಗೆ ಮೌಖಿಕ ದೂರು ಸಲ್ಲಿಸಲಾಗಿದೆ.
ಕೂಡಲೇ ಆಡಳಿತ ಮಂಡಳಿಯವರು ತಾಲೂಕು ಶಿಕ್ಷಣಾಧಿಕಾರಿ ಹಾಗೂ ಸುಂಟಿಕೊಪ್ಪ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಟ್ಯಾಂಕ್ ನೀರಿನಲ್ಲಿ ದುಷ್ಕರ್ಮಿಗಳು ವಿಷಕಾರಿ ರಾಸಾಯನಿಕ ಬೆರೆಸಿರುವುದು ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments