Publish Date: Wed, 05 Dec 2018 (20:45 IST)
Updated Date: Wed, 05 Dec 2018 (20:47 IST)
ಸಾಣೆಹಳ್ಳಿ ಶ್ರೀಗಳ ವಿರುದ್ಧ ಹೇಳಿಕೆ ನೀಡಿರುವ ಎಂಎಲ್ ಸಿ ರಘು ಆಚಾರ್ ವಿರುದ್ಧ ಪ್ರತಿಭಟನೆ ಶುರುವಾಗಿದೆ.
ದಾವಣಗೆರೆಯ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ದಾವಣಗೆರೆ ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ್ದ ಜಾಗತಿಕ ಲಿಂಗಾಯಿತ ಮಹಾಸಭಾ, ಶಿವಸೈನ್ಯ ಕಾರ್ಯಕರ್ತರು ರಘು ಆಚಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಾಣೆಹಳ್ಳಿ ಪಂಡಿತರಾಧ್ಯ ಶ್ರೀಗಳ ಬಗ್ಗೆ
ಪೀಠ ಬಿಟ್ಟು ಬನ್ನಿ, ತೀಟೆ ಇರುವವರು ಮಠಕ್ಕೆ ಹೋಗುತ್ತಾರೆ ಎಂದು ಹೇಳಿಕೆ ನೀಡಿರುವ ರಘು ಆಚಾರ್ ವಿರುದ್ಧ ಪಕ್ಷಾತೀತವಾಗಿ ರಾಜಕೀಯ ಪಕ್ಷಗಳು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಈ ವೇಳೆ ಜಯಮೃತ್ಯುಂಜಯ ಸ್ವಾಮೀಜಿ ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿ, ಸಾಣೆಹಳ್ಳಿ ಶ್ರೀಗಳು ಒಳ್ಳೆಯ ಹೆಸರು ಗಳಿಸಿದ್ದಾರೆ. ಅವರ ವಿರುದ್ಧ ರಘು ಆಚಾರ್ ಅವಿವೇಕಿತನದ ಹೇಳಿಕೆ ನೀಡಿದ್ದಾರೆ. ಈ ಕೂಡಲೇ ಮಠಕ್ಕೆ ತೆರಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.