Select Your Language

Notifications

webdunia
webdunia
webdunia
webdunia

ರಾಜ್ಯದೆಲ್ಲೆಡೆ ಸತೀಶ್ ಜಾರಕಿಹೊಳಿ ವಿರುದ್ಧ ಭುಗಿಲೆದ್ದ ಆಕ್ರೋಶ

ರಾಜ್ಯದೆಲ್ಲೆಡೆ ಸತೀಶ್ ಜಾರಕಿಹೊಳಿ ವಿರುದ್ಧ  ಭುಗಿಲೆದ್ದ ಆಕ್ರೋಶ
bangalore , ಬುಧವಾರ, 9 ನವೆಂಬರ್ 2022 (15:30 IST)
ಹಿಂದೂ ಪದದ ಬಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ರಾಜ್ಯವ್ಯಾಪಿ ಸತೀಶ್ ಜಾರಕಿಹೊಳಿ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಲು ಬಿಜೆಪಿಗೆ ಹೊಸ ಅಸ್ತ್ರವಾಗಿದ್ದು.ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು,ಬಿಜೆಪಿ ಮೋರ್ಚಾಗಳಿಂದ ಬೆಂಗಳೂರಿನ ಮೈಸೂರ್ ಬ್ಯಾಂಕ್ ಸರ್ಕಲ್ ಬಳಿ ಪ್ರತಿಭಟನೆ ನಡೆಯುತ್ತಿದೆ.ಹಿಂದೂ ವಿರೋದಿ ಕಾಂಗ್ರೆಸ್ ಪಕ್ಷ ಎಂದು ಘೋಷಣೆ ಕೂಗಿ ಪ್ರತಿಭಟಿಸುತ್ತಿದ್ದಾರೆ.
 
ಬಿಜೆಪಿ ಯುವಮೋರ್ಛಾ ರಾಜ್ಯಾಧ್ಯಕ್ಷ ಸಂದೀಪ್ ಕುಮಾರ್ ನೇತೃತ್ವದಲ್ಲಿ ಧರಣಿ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಮತ್ತು ಸತೀಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.ರಸ್ತೆ ಮಧ್ಯೆ ಟ್ರಾಫಿಕ್ ನಡುವೆಯೇ ಪ್ರತಿಕೃತಿ ದಹನ ಮಾಡಿ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದಾರೆ.ಇನ್ನೂ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತದಂತೆ ಒ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಚದುರಿಸಿದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಶಿಕ್ಷಕರು ಬೈದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕ