ಕೈ ಪಡೆ ವಿರುದ್ಧ ಲಿಂಗಾಯಿತರಲ್ಲಿ ಭುಗಿಲೆದ್ದ ಆಕ್ರೋಶ

ಗುರುವಾರ, 25 ಏಪ್ರಿಲ್ 2019 (14:41 IST)
ಕಾಂಗ್ರೆಸ್ ವಿರುದ್ಧ ಲಿಂಗಾಯಿತರಲ್ಲಿ ಆಕ್ರೋಶ ಭುಗಿಲೆದ್ದಿದ್ದು, ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಬೀದಿಗಿಳಿದ ಲಿಂಗಾಯತರು ಕೈ ನಾಯಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಾವಣಗೆರೆ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಲಿಂಗಾಯತರು ಧಿಕ್ಕಾರ ಕೂಗಿದ್ರು.

ಕೈ ನಾಯಕ ಹಾಗೂ ದಾವಣಗೆರೆ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಡಾ.ವೈ.ರಾಮಪ್ಪ ವಿರುದ್ಧ ಪ್ರತಿಭಟನೆ ನಡೆಸಿದ್ರು.

ರಾಮಪ್ಪ ಲಿಂಗಾಯತರ ಬಗ್ಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿವೆ ರಾಮಪ್ಪನ ಮಾತು. ಇದನ್ನ ಖಂಡಿಸಿ ಬೀದಿಗಳಿದು ಹೋರಾಟ ನಡೆಸಲಾಗುತ್ತಿದೆ.

ದಾವಣಗೆರೆ ‌ನಗರದ ಅಂಬೇಡ್ಕರ್ ವೃತ್ತದಿಂದ ಎಸಿ ಕಚೇರಿ ವರೆಗೆ ಬೃಹತ್ ಪ್ರತಿಭಟನೆ ನಡೆಸಲಾಯಿತು.ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಇಂಜಿನಿಯರಿಂಗ್ ಹುಡುಗಿ ಸಾವಿಗೆ ಮಿಡಿದ ವಿದ್ಯಾರ್ಥಿಗಳು