Select Your Language

Notifications

webdunia
webdunia
webdunia
webdunia

ಹೊರಗಿನಿಂದ ಬಂದವರು ಗಲಭೆ ಮಾಡಿರಬಹುದು: ಮದ್ದೂರು ಘಟನೆಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

Maddur riots, Ganapati idol burial procession, Minister Chaluvarayaswamy

Sampriya

ಮಂಡ್ಯ , ಸೋಮವಾರ, 8 ಸೆಪ್ಟಂಬರ್ 2025 (14:09 IST)
ಮಂಡ್ಯ: ರಾಜಕೀಯವಾಗಿ ನಮ್ಮನ್ನು ಎದುರಿಸಲಾಗದ ಬಿಜೆಪಿ, ಜೆಡಿಎಸ್‌ನವರು ಮದ್ದೂರು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಕಿಡಿಕಾಡಿದ್ದಾರೆ. 

ಮದ್ದೂರಿನಲ್ಲಿ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಹಿಂದೂ ಹಾಗೂ ಮುಸ್ಲಿಂ ಯುವಕರ ಗುಂಪುಗಳ ನಡುವೆ ಭಾನುವಾರ ರಾತ್ರಿ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ  ಅವರು ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ, ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಬಿಜೆಪಿಯ ಹಾಗೂ ಜೆಡಿಎಸ್‌ನ ಕೆಲವು ನಾಯಕರು ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಪರಿಸ್ಥಿತಿಯನ್ನು ತಿಳಿಗೊಳಿಸುವುದು ಬಿಟ್ಟು, ಕೋಮುಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳನ್ನು ತೂರಿರುವ ಬಗ್ಗೆ ಮಾಹಿತಿ ಇದೆ. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ 21 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಯಾವ ಹಿಂದೂಗಳ ಮೇಲೂ ಪ್ರಕರಣ ದಾಖಲಾಗಿಲ್ಲ ಎಂದು ಮಾಹಿತಿ ನೀಡಿದರು.

ಗಲಭೆ ನಡೆದ ಕೆಲವೇ ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಇಷ್ಟು ಬೇಗ ಕ್ರಮ ತೆಗೆದುಕೊಂಡ ಮತ್ತೊಂದು ಪ್ರಕರಣ ಇಲ್ಲ. ಮದ್ದೂರಿನಲ್ಲಿ ಹಿಂದೆ ಎಂದೂ ಈ ರೀತಿಯ ಘಟನೆ ನಡೆದಿಲ್ಲ, ಹೊರಗಿನಿಂದ ಬಂದು ಯಾರೋ‌ ಗಲಭೆ ಮಾಡಿರಬಹುದು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು. 

ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಸಹಿಸಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಆಗುತ್ತಿಲ್ಲ. ಸದನದಲ್ಲಿ ನಮನ್ನು ಎದುರಿಸಲು ಆಗದು ಎಂಬ ಕಾರಣಕ್ಕೆ, ಇಂತಹ ಘಟನೆಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ಕೆಂಡಕಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯನವರ ಶಾಂತಿ ದೂತರೇ ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ಎಸೆದಿದ್ದು: ಸಿಟಿ ರವಿ