Webdunia - Bharat's app for daily news and videos

Install App

ಹೊರಗಿನಿಂದ ಬಂದವರು ಗಲಭೆ ಮಾಡಿರಬಹುದು: ಮದ್ದೂರು ಘಟನೆಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

Sampriya
ಸೋಮವಾರ, 8 ಸೆಪ್ಟಂಬರ್ 2025 (14:09 IST)
ಮಂಡ್ಯ: ರಾಜಕೀಯವಾಗಿ ನಮ್ಮನ್ನು ಎದುರಿಸಲಾಗದ ಬಿಜೆಪಿ, ಜೆಡಿಎಸ್‌ನವರು ಮದ್ದೂರು ಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಸಚಿವ ಚಲುವರಾಯಸ್ವಾಮಿ ಕಿಡಿಕಾಡಿದ್ದಾರೆ. 

ಮದ್ದೂರಿನಲ್ಲಿ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಹಿಂದೂ ಹಾಗೂ ಮುಸ್ಲಿಂ ಯುವಕರ ಗುಂಪುಗಳ ನಡುವೆ ಭಾನುವಾರ ರಾತ್ರಿ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ  ಅವರು ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ, ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಬಿಜೆಪಿಯ ಹಾಗೂ ಜೆಡಿಎಸ್‌ನ ಕೆಲವು ನಾಯಕರು ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಪರಿಸ್ಥಿತಿಯನ್ನು ತಿಳಿಗೊಳಿಸುವುದು ಬಿಟ್ಟು, ಕೋಮುಗಲಭೆಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳನ್ನು ತೂರಿರುವ ಬಗ್ಗೆ ಮಾಹಿತಿ ಇದೆ. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ 21 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಯಾವ ಹಿಂದೂಗಳ ಮೇಲೂ ಪ್ರಕರಣ ದಾಖಲಾಗಿಲ್ಲ ಎಂದು ಮಾಹಿತಿ ನೀಡಿದರು.

ಗಲಭೆ ನಡೆದ ಕೆಲವೇ ಗಂಟೆಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. ಇಷ್ಟು ಬೇಗ ಕ್ರಮ ತೆಗೆದುಕೊಂಡ ಮತ್ತೊಂದು ಪ್ರಕರಣ ಇಲ್ಲ. ಮದ್ದೂರಿನಲ್ಲಿ ಹಿಂದೆ ಎಂದೂ ಈ ರೀತಿಯ ಘಟನೆ ನಡೆದಿಲ್ಲ, ಹೊರಗಿನಿಂದ ಬಂದು ಯಾರೋ‌ ಗಲಭೆ ಮಾಡಿರಬಹುದು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ತಿಳಿಸಿದರು. 

ರಾಜ್ಯ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಸಹಿಸಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಆಗುತ್ತಿಲ್ಲ. ಸದನದಲ್ಲಿ ನಮನ್ನು ಎದುರಿಸಲು ಆಗದು ಎಂಬ ಕಾರಣಕ್ಕೆ, ಇಂತಹ ಘಟನೆಗಳನ್ನು ಪ್ರಚೋದಿಸುತ್ತಿದ್ದಾರೆ ಎಂದು ಕೆಂಡಕಾಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ ದಾಳಿಗೆ ಪ್ರತೀಕಾರ ತೀರಿಸದ ಕಾಂಗ್ರೆಸ್‌ಗೆ ಪಾಕಿಸ್ತಾನ ಮೇಲೆ ವಿಪರೀತ ಪ್ರೀತಿ

ಮುಂಬೈ, ಐಫೋನ್‌ 17 ಮಾರಾಟಕ್ಕೆ ಬರುತ್ತಿದ್ದಂತೆ ಕಿತ್ತಾಡಿಕೊಂಡ ಗ್ರಾಹಕರು

ಸ್ನೇಹಿತನಿಗೆ ಇರಿದ ಭಾರತದ ಟೆಕ್ಕಿಯನ್ನು ಗುಂಡಿಕ್ಕಿ ಹತ್ಯೆ: ಸಮಗ್ರ ತನಿಖೆ ಕುಟುಂಬ ಒತ್ತಾಯ

ಪಾಕಿಸ್ತಾನಕ್ಕೆ ಹೋದರೆ ಮನೆಗೇ ಹೋದಂತೆ ಅನಿಸುತ್ತದಂತೆ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾಗೆ

ಶೇಕ್ ಹ್ಯಾಂಡ್ ಮಾಡಬೇಕೆಂಬ ರೂಲ್ಸ್‌ ಇಲ್ಲ: ಪಾಕ್‌ ಆರೋಪಕ್ಕೆ ಮಾಜಿ ಅಂಪೈರ್ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments