Webdunia - Bharat's app for daily news and videos

Install App

ದೇಶಾದ್ಯಂತ ಮೊದಲ ದಿನ 40 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಲಸಿಕೆ

Webdunia
ಮಂಗಳವಾರ, 4 ಜನವರಿ 2022 (18:17 IST)
ಇಡೀ ದೇಶದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಜನವರಿ 3 ರಂದು ಕೋವ್ಯಾಕ್ಸಿನ್ ಮೊದಲ ಡೋಸ್ ನೀಡಲು ಪ್ರಾರಂಭಿಸಲಾಗಿದೆ. 15 ರಿಂದ 18 ವರ್ಷದ ಮಕ್ಕಳಿಗೆ ಸೋಮವಾರ ಲಸಿಕೆಗೆ ಚಾಲನೆ ನೀಡಲಾಗಿತ್ತು.
ಮೊದಲ ದಿನದಂದೇ 40 ಲಕ್ಷಕ್ಕೂ ಅಧಿಕ ಮಕ್ಕಳು ಲಸಿಕೆಯನ್ನು ಪಡೆದಿದ್ದಾರೆ ಎಂದು ಕೋವಿನ್ ಪೋರ್ಟಲ್‌ನಲ್ಲಿ ವರದಿಯಾಗಿದೆ. ಮೊದಲ ದಿನ 39.88 ಲಕ್ಷ ಮಕ್ಕಳು ಸೋಮವಾರ ಮಧ್ಯಾಹ್ನದವರೆಗೆ ಕೋವಿನ್ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ತೀವ್ರವಾಗಿ ಹರಡುತ್ತಿರುವ ಕೋವಿಡ್ ರೂಪಾಂತರಿ ಓಮಿಕ್ರಾನ್ ಭೀತಿಯಿಂದಾಗಿ 15 ರಿಂದ 18 ವರ್ಷದ ಮಕ್ಕಳಿಗೂ ಕೋವಿಡ್ ಲಸಿಕೆಗಳನ್ನು ನೀಡುವ ಪ್ರಕ್ರಿಯೆ ಪ್ರಾರಂಭ ಮಾಡಲಾಯಿತು.
ಕರ್ನಾಟಕದಲ್ಲಿ ಮೊದಲ ದಿನ 4 ಲಕ್ಷಕ್ಕೂ ಹೆಚ್ಚು ಮಕ್ಕಳು ಲಸಿಕೆಗಳನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ. ಮೊದಲ ದಿನ 6.3 ಲಕ್ಷ ಮಕ್ಕಳಿಗೆ ಲಸಿಕೆಯನ್ನು ನೀಡುವ ಗುರಿ ಹೊಂದಿತ್ತು. ಇದರಲ್ಲಿ ಶೇ.65 ಮಕ್ಕಳು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments