Publish Date: Thu, 01 Sep 2022 (21:42 IST)
Updated Date: Thu, 01 Sep 2022 (21:44 IST)
ರಾಜ್ಯದಲ್ಲಿ ಬಿಟ್ಟು ಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆ ಆಲೂರ ಬಲಿ ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿವೆ. ಬೆಣ್ಣೆಹಳ್ಳ ಪ್ರವಾಹದಿಂದ ಸೇತುವೆ ಮೇಲ್ಭಾಗದಲ್ಲಿ ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ಬಂದ್ ಆಗಿದೆ..ಹೊಳೆ ಆಲೂರನಿಂದ ಬಾದಾಮಿ, ಬನಶಂಕರಿ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಬೆಣ್ಣೆಹಳ್ಳ, ಮಲಪ್ರಭಾ ನದಿ ಹೀಗಾಗಿ ರಸ್ತೆಗೆ ಅಡ್ಡಲಾಗಿ ಮುಳ್ಳಿನಗಿಡಗಳನ್ನ ಇಟ್ಟು ಸಂಚಾರ ಬಂದ್ ಮಾಡಲಾಗಿದೆ.