Select Your Language

Notifications

webdunia
webdunia
webdunia
webdunia

ಪಾಕಿಸ್ತಾನ, ಸಿದ್ರಾಮಯ್ಯ ಮಾತ್ರ ಮೋದಿ ನಾಯಕತ್ವ ಒಪ್ಪಿಕೊಂಡಿಲ್ಲ: ಈಶ್ವರಪ್ಪ

ಪಾಕಿಸ್ತಾನ, ಸಿದ್ರಾಮಯ್ಯ ಮಾತ್ರ ಮೋದಿ ನಾಯಕತ್ವ ಒಪ್ಪಿಕೊಂಡಿಲ್ಲ: ಈಶ್ವರಪ್ಪ
ಮೈಸೂರು , ಬುಧವಾರ, 5 ಏಪ್ರಿಲ್ 2017 (13:12 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವವನ್ನು ಇಡೀ ವಿಶ್ವವೇ ಒಪ್ಪಿಕೊಂಡಿದೆ. ಆದರೆ, ಪಾಕಿಸ್ತಾನ, ಸಿದ್ರಾಮಯ್ಯ ಮಾತ್ರ ಮೋದಿ ನಾಯಕತ್ವ ಒಪ್ಪಿಕೊಂಡಿಲ್ಲ ಎಂದು ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
 
ನಂಜನಗೂಡು ಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಭಾರಿ ಬಹುಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯ ರೈತಪರವಾಗಿದ್ದರೆ ಕೂಡಲೇ ರೈತರ ಸಾಲ ಮನ್ನಾ ಘೋಷಿಸಲಿ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಖಚಿತವಾಗಿ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.
 
ರಾಜ್ಯಾದ್ಯಂತ ಜನತೆ ಸಿಎಂ ಸಿದ್ದರಾಮಯ್ಯರ ದುರಾಡಳಿತದಿಂದ ಬೇಸತ್ತಿದ್ದು, ಬಿಜೆಪಿ ಪರ ವಾಲುತ್ತಿದ್ದಾರೆ. ಅನೇಕ ಕಾಂಗ್ರೆಸ್ ನಾಯಕರು ಕೂಡಾ ಬಿಜೆಪಿ ಪಕ್ಷಕ್ಷೆ ಸೇರ್ಪಡೆಯಾಗಲಿದ್ದಾರೆ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗೋ ಸಾಗಣೆ ಮಾಡುತ್ತಿದ್ದಾಗ ಹಲ್ಲೆಗೊಳಗಾದ ವ್ಯಕ್ತಿ ಸಾವು