Publish Date: Tue, 02 Aug 2022 (19:44 IST)
Updated Date: Tue, 02 Aug 2022 (19:47 IST)
ಉನ್ನತ ಕಮಾಂಡರ್ ಸೇರಿದಂತೆ 6 ಸಿಬ್ಬಂದಿ ಪ್ರಯಾಣಿಸುತ್ತಿದ್ದ ಪಾಕಿಸ್ತಾನ ಸೇನೆಯ ಹೆಲಿಕಾಪ್ಟರ್ ನಾಪತ್ತೆಯಾಗಿದೆ ಎಂದು ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಷನ್ಸ್ ಖಚಿತಪಡಿಸಿದೆ. ದೇಶದ ಪ್ರವಾಹ ಪೀಡಿತ ಪ್ರದೇಶವಾದ ನೈಋತ್ಯ ಭಾಗದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯಲ್ಲಿ ಸೇನಾ ಹೆಲಿಕಾಪ್ಟರ್ ಹಾರಾಟ ನಡೆಸುತ್ತಿತ್ತು. ಈ ವೇಳೆ ಪ್ರಾದೇಶಿಕ ಕಂಟ್ರೋಲ್ ಟವರ್ ಸಂಪರ್ಕ ಕಳೆದುಕೊಂಡಿದ್ದು, ನಾಪತ್ತೆಯಾಗಿದೆ ಎಂದು ಸೇನೆ ತಿಳಿಸಿದೆ..ಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿದ್ದ ಪಾಕಿಸ್ತಾನ ಸೇನೆಯ ವಾಯುಯಾನದ ಹೆಲಿಕಾಪ್ಟರ್ ಎಟಿಸಿ ಸಂಪರ್ಕ ಕಳೆದುಕೊಂಡಿದೆ. ಬಲೂಚಿಸ್ತಾನದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದ ಕಮಾಂಡರ್ 12 ಕಾರ್ಪ್ಸ್ ಸೇರಿದಂತೆ ಆರು ವ್ಯಕ್ತಿಗಳು ವಿಮಾನದಲ್ಲಿದ್ದರು. ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಟ್ವೀಟ್ ಮಾಡಲಾಗಿದೆ.