ಸರ್ಜಿಕಲ್ ಸ್ಟ್ರೈಕ್‌ಗೆ ಪ್ರತಿಯಾಗಿ ಪಾಕಿಸ್ತಾನದ ಹ್ಯಾಕರ್ಸ್‌ಗಳ ಕೆಂಗಣ್ಣು ದೇಶದ ಧಾರ್ಮಿಕ ಕೇಂದ್ರಗಳ ಮೇಲೆ ಬಿದ್ದಿದ್ದು, ಉಡುಪಿ ಪೇಜಾವರ್ ಮಠದ ಅಧಿಕೃತ ವೆಬ್‌ಸೈಟ್‌ನ್ನು ಹ್ಯಾಕ್ ಮಾಡಿದ್ದಾರೆ.
ಎರಡು ದಿನಗಳ ಹಿಂದ ಪೇಜಾವರ್ ಮಠದ ಅಧಿಕೃತ ವೆಬ್‌ಸೈಟ್ ಹ್ಯಾಕ್ ಆಗಿರುವ ಕುರಿತು ಮಠದ ಆಡಳಿತ ಮಂಡಳಿಯ ಗಮನಕ್ಕೆ ಬಂದಿತ್ತು. ಮಠದ ಅಧಿಕೃತ ವೆಬ್‌ಸೈಟ್ ಓಪನ್ ಮಾಡುವಾಗ 'ಹ್ಯಾಕಡ್ ಬಾಯ್ ಪಾಕ್ ಸೈಬರ್ ಪ್ರೊಫೆಶನಲ್ಸ್' ಎಂಬ ಸಂದೇಶ ಕಾಣುತಿತ್ತು.
ಈ ಕುರಿತು ಕೃಷ್ಣಮಠದ ಆಡಳಿತ ಮಂಡಳಿ ಉಡುಪಿ ನಗರ ಠಾಣೆಗೆ ದೂರು ನೀಡಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಸೈಬರ್ ಕ್ರೈಂ ವಿಭಾಗಕ್ಕೆ ಮಾಹಿತಿ ರವಾನಿಸಿದ್ದು, ಸೈಬರ್ ಕ್ರೈಂ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಭಾರತೀಯ ಸೈನಿಕರು ನಡೆಸಿ ಸರ್ಜಿಕಲ್ ಸ್ಟ್ರೈಕ್‌ಗೆ ಪ್ರತಿಯಾಗಿ ಪಾಕಿಸ್ತಾನದ ಹ್ಯಾಕರ್ಸ್‌ಗಳು ಭಾರತದ ಧಾರ್ಮಿಕ ಕೇಂದ್ರಗಳನ್ನು ಟಾರ್ಗೆಟ್ ಮಾಡುತ್ತಿವೆ ಎಂದು ಹೇಳಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ