Select Your Language

Notifications

webdunia
webdunia
webdunia
webdunia

ಪಾಕ್‌ನ ಹೆಡೆಮುರಿ ಕಟ್ಟಬಹುದು, ಆದ್ರೆ ಕಾಂಗ್ರೆಸ್‌ನ ಹರಕಲು ಬಾಯಿ ಮುಚ್ಚಿಸಲು ಸಾಧ್ಯವಿಲ್ಲ‌: ಅಶೋಕ್‌

ಬಿಜೆಪಿ ಮುಖಂಡ ಆರ್ ಅಶೋಕ್

Sampriya

ಬೆಂಗಳೂರು , ಶುಕ್ರವಾರ, 25 ಏಪ್ರಿಲ್ 2025 (17:51 IST)
Photo Credit X
ಬೆಂಗಳೂರು: ಪಾಪಿ ಪಾಕಿಸ್ತಾನದ ಹೆಡೆಮುರಿ ಕಟ್ಟಬಹುದು ಆದರೆ, ದೇಶದ್ರೋಹಿ ಕಾಂಗ್ರೆಸ್ ನಾಯಕರ ಹರಕಲು ಬಾಯಿ ಮುಚ್ಚಿಸಲು ಸಾಧ್ಯವಿಲ್ಲ‌ ಎಂದು ವಿರೋಧ ಪಕ್ಷದ ನಾಯಕ ಆರ್‌ ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಪಹಲ್ಗಾಮ್‌ನಲ್ಲಿ ಧರ್ಮ ಕೇಳಿ ಯಾರನ್ನೂ ಕೊಂದಿಲ್ಲ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷಣ್ ಹೇಳಿಕೆಗೆ ಆರ್‌ ಅಶೋಕ್‌ ತಿರುಗೇಟು ಕೊಟ್ಟಿದ್ದಾರೆ.

ಐಡಿ ಕಾರ್ಡ್ ನೋಡಿ, ಧರ್ಮದ ಹೆಸರು ಕೇಳಿ, ಕಲ್ಮಾ ಹೇಳಿಸಿ, ಪ್ಯಾಂಟು ಬಿಚ್ಚಿ ಪರೀಕ್ಷಿಸಿ ಮತಾಂಧ ಉಗ್ರರು ತಮ್ಮ ಕಣ್ಣೆದುರಿಗೇ ಪಾಯಿಂಟ್ ಬ್ಲ್ಯಾಂಕ್ ನಲ್ಲಿ ತಲೆಗೆ ಗುಂಡಿಕ್ಕಿ ತಮ್ಮ ಪತಿಯನ್ನು, ತಂದೆಯನ್ನು ಕೊಂದ ಕಣ್ಣೀರಿನ ಕಥೆ ಹೇಳುತ್ತಿರುವ ಸಂತ್ರಸ್ತ ಮಹಿಳೆಯರು, ಮಕ್ಕಳ ಆಕ್ರಂದನ ನಿಮಗೆ ಕೇಳುತ್ತಿಲ್ಲವೇ ಎಂ.ಲಕ್ಷಣ್ ಅವರೇ?

ಇಡೀ ದೇಶವೇ ಕಣ್ಣೀರಿಡುತ್ತಿರುವ ಇಂತಹ ಸಂದರ್ಭದಲ್ಲೂ ನಿಮ್ಮ ಓಲೈಕೆ ರಾಜಕಾರಣ ಮುಂದುವರೆಸುತ್ತಿದ್ದೀರಲ್ಲ ನಿಮ್ಮ ನಾಚಿಕೆಗೇಡುತನಕ್ಕೆ ಏನು ಹೇಳೋಣ.

ಗಡಿಯಲ್ಲಿ ಸೇನಾಪಡೆಗಳು ತಮ್ಮ ಪ್ರಾಣವನ್ನೇ ಒತ್ತೆ ಇಟ್ಟು ಪ್ರತೀಕಾರಕ್ಕಾಗಿ ಸಜ್ಜಾಗುತ್ತಿದ್ದರೆ ಇಲ್ಲಿ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ವ್ಯಂಗ್ಯ ಮಡುತ್ತಿದ್ದೀರಲ್ಲ ನಿಮ್ಮ ಭಂಡ ಬಾಳಿಗೆ ಏನು ಹೇಳೋಣ. ಧರ್ಮದ ಹೆಸರು ಕೇಳಿ ಕೊಲ್ಲುವ ಉಗ್ರರಿಗೂ, ಸೇನಾಪಡೆಗಳ ಕಾರ್ಯಾಚರಣೆಗೆ ಸಾಕ್ಷಿ ಕೇಳುವ ನಿಮಗೂ ಯಾವುದೇ ವ್ಯತ್ಯಾಸವಿಲ್ಲ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರೇ, ನಿಮ್ಮ ಕಾಂಗ್ರೆಸ್ ಪಕ್ಷಕ್ಕೆ ಕಿಂಚಿತ್ತಾದರೂ ದೇಶಭಕ್ತಿ ಇದ್ದರೆ, ಎಳ್ಳಷ್ಟಾದರೂ ರಾಷ್ಟ್ರಪ್ರೇಮ ಇದ್ದರೆ ಈ ಕೊಡಲೇ ಲಕ್ಷಣ್ ಅವರನ್ನ ಪಕ್ಷದಿಂದ ಉಚ್ಚಾಟನೆ ಮಾಡಿ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕದಲ್ಲಿರುವ ಎಲ್ಲಾ ಪಾಕಿಸ್ತಾನ ಪ್ರಜೆಗಳಿಗೂ ಗೇಟ್ ಪಾಸ್: ಜಿ ಪರಮೇಶ್ವರ್