ಅಪ್ರಾಪ್ತ ಬಾಲಕಿಯೊಂದಿಗೆ ಹಸೆಮಣೆಯೇರಿ ಕಳ್ಳಾಟವಾಡಿದ ಪಂಚಾಯಿತಿ ಅಧ್ಯಕ್ಷನಿಗೆ ಬಂಧನ ಭೀತಿ

Sampriya
ಭಾನುವಾರ, 31 ಆಗಸ್ಟ್ 2025 (11:58 IST)
Photo Credit X
ಬೆಳಗಾವಿ: ಅಪ್ರಾಪ್ತ ಬಾಲಕಿಯೊಂದಿಗೆ ಹಸೆಮಣೆಯೇರಿ, ಬಳಿಕ ಬಾಲಕಿಯ ನಕಲಿ ಪ್ರಮಾಣಪತ್ರವನ್ನು ಬಿಡುಗಡೆ ಮಾಡುವ ಮೂಲಕ ಕಳ್ಳಾಟವಾಡಿದ್ದ ಗ್ರಾಮ ಪಂಚಾಯಿತಿ ಅಧ್ಯಕ್ಷನಿಗೆ ಈಗ ಬಂಧನ ಭೀತಿ ಎದುರಾಗಿದೆ. 

ಈ ಘಟನೆಯು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷನೊಬ್ಬ 15 ವರ್ಷದ ಬಾಲಕಿಯನ್ನು ವಿವಾಹವಾಗಿ ಈಗ ಪೇಚಿಗೆ ಸಿಲುಕಿಕೊಂಡಿದ್ದಾನೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತವರು ಜಿಲ್ಲೆ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ.  

ಬಸ್ಸಾಪುರ ಗ್ರಾಮ ಪಂಚಯಿತಿ ಅಧ್ಯಕ್ಷ ‌ಭೀಮಶಿ ಕಾಲಿಮಣಿ ಎಂಬಾತನ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹುಕ್ಕೇರಿ ತಾಲೂಕಿನ ಯಮಕನಮರಡಿ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. 2023ರ ನ.5 ರಂದು ಅಪ್ರಾಪ್ತೆ ಜೊತೆಗೆ ಭೀಮಶಿ ಕಾಲಿಮಣಿ ವಿವಾಹವಾಗಿದ್ದ ಎನ್ನಲಾಗಿದೆ.

ಬಂಧನದ ಭೀತಿಯಿಂದ ತಪ್ಪಿಸಿಕೊಳ್ಳಲು ಭೀಮಶಿ ಕಳ್ಳಾಟ ನಡೆಸುತ್ತಿದ್ದಾನೆ‌. ದೂರು ಬಂದ ತಕ್ಷಣವೇ ಬಸ್ಸಾಪುರ ಗ್ರಾಮಕ್ಕೆ ನಾಲ್ಕು ಸಲ ಮಕ್ಕಳ ರಕ್ಷಣಾ ತಂಡ ಹೋಗಿದೆ. ಬಾಲಕಿ ಪತ್ತೆಹಚ್ಚಲು ಮಕ್ಕಳ ರಕ್ಷಣಾ ‌ತಂಡ ವಿಫಲವಾಗಿದೆ. ಈ ಮಧ್ಯೆಯೇ ಆಕೆ ಪ್ರಾಪ್ತ ವಯಸ್ಸಿನವಳು ಎಂಬ ದಾಖಲೆಯನ್ನು ಅಧ್ಯಕ್ಷ ಬಿಡುಗಡೆ ಮಾಡಿ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದ ಎನ್ನಲಾಗಿದೆ.

ಅಧ್ಯಕ್ಷ ಬಂಧನದ ಭೀತಿಯಿಂದ ‌ಪತ್ನಿಯ ನಕಲಿ ಜನನ ಪ್ರಮಾಣ ಪತ್ರ ವೈರಲ್ ಮಾಡಿದ್ದ ಎನ್ನಲಾಗಿದೆ. ಶಾಲಾ‌ ಟ್ರಾನ್ಸ್‌ಫರ್ ಸರ್ಟಿಫಿಕೇಟ್ ಜೊತೆಗೆ ಹೊಸ ಜನನ ಪ್ರಮಾಣದ ‌ದಾಖಲೆ‌ ಹೋಲಿಕೆ ಮಾಡಿದ ಅಧಿಕಾರಿಗಳು‌, ಗ್ರಾಪಂ ಅಧ್ಯಕ್ಷ ‌ಭೀಮಶಿ ಕಾಲಿಮಣಿ ಬಾಲ್ಯ ವಿವಾಹ ಆಗಿರುವುದು ದೃಢವಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಪ್ರಿಯಕರನ ಜೊತೆ ಸೇರಿ ಗಂಡನ ಕೊಂದು ಡ್ರಮ್ ನಲ್ಲಿರಿಸಿದ್ದ ಮುಸ್ಕಾನ್ ಕತೆ ಏನಾಗಿದೆ ನೋಡಿ

ಯಡಿಯೂರಪ್ಪ ಅಂದೇ ಡಿಕೆ ಶಿವಕುಮಾರ್ ಭವಿಷ್ಯ ನುಡಿದಿದ್ದರು

ಮುಂದಿನ ಸುದ್ದಿ