ಪತ್ನಿ ಕೊಂದ, ಮಗಳನ್ನುಪತ್ನಿ ಕೊಂದ, ಮಗಳನ್ನು ಕೊಲ್ಲಲು ಯತ್ನಿಸಿದ ಪಾಪಿ ಅಪ್ಪ!

Webdunia
ಶುಕ್ರವಾರ, 24 ಜೂನ್ 2022 (11:25 IST)
ಬೆಂಗಳೂರು :  ಸಾಲ ಮಾಡಿದ್ದನ್ನು ಪ್ರಶ್ನಿಸಿದ ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆಗೈದು ಬಳಿಕ ಮಗಳ ಹತ್ಯೆಗೂ ಯತ್ನಿಸಿದ ಟೈಲರ್ ತಾನಾಗಿಯೇ ಪೊಲೀಸರಿಗೆ ಶರಣಾಗಿರುವ ಘಟನೆ ಯಶವಂತಪುರ ಸಮೀಪ ಬುಧವಾರ ಮುಂಜಾನೆ ನಡೆದಿದೆ.

ಮತ್ತಿಕೆರೆ ನಿವಾಸಿ ಅನುಸೂಯಾ (42) ಕೊಲೆಯಾದ ದುರ್ದೈವಿ. ತಂದೆಯಿಂದ ಚಾಕುವಿನಿಂದ ಇರಿತಕ್ಕೊಳಗಾಗಿರುವ ಸಹನಾ (14) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಪಾಯದಿಂದ ಸುರಕ್ಷಿತವಾಗಿದ್ದಾಳೆ.

ಕೃತ್ಯ ಎಸಗಿದ ಬಳಿಕ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಟೈಲರ್ ಧನೇಂದ್ರ ರೆಡ್ಡಿ (49) ಶರಣಾಗಿದ್ದಾನೆ.

17 ವರ್ಷಗಳ ಹಿಂದೆ ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯ ಧನೇಂದ್ರ ರೆಡ್ಡಿ ಹಾಗೂ ಅನುಸೂಯಾ ವಿವಾಹವಾಗಿದ್ದು, ಯಶವಂತಪುರ ಸಮೀಪದ ಮತ್ತಿಕೆರೆಯಲ್ಲಿ ವಾಸವಾಗಿದ್ದರು. ದಂಪತಿಯ ಮಗಳು ಸಹನಾ 9ನೇ ತರಗತಿ ಓದುತ್ತಿದ್ದಳು.

ಮನೆ ಪಕ್ಕದಲ್ಲೇ ಇಬ್ಬರು ಟೈಲರಿಂಗ್ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ಇತ್ತೀಚೆಗೆ ಪರಿಚಿತರ ಬಳಿ ರೆಡ್ಡಿ .2 ಲಕ್ಷ ಸಾಲ ಮಾಡಿದ್ದ. ಇದಕ್ಕೆ ಆಕ್ಷೇಪಿಸಿದ ಅನುಸೂಯಾ, ‘ಮನೆಯಲ್ಲಿ ತುಂಬಾ ಕಷ್ಟವಿದೆ. ಮುಂದೆ ಮಗಳ ಓದಿಗೆ ಹಣದ ಅವಶ್ಯಕತೆ ಇದೆ. ಹೀಗಿದ್ದರೂ ಸುಖಾಸುಮ್ಮನೆ ಸಾಲ ಮಾಡೋದು ಸರಿಯೇ’ ಎಂದು ಪತಿಯನ್ನು ಪ್ರಶ್ನಿಸುತ್ತಿದ್ದರು.

ಇದೇ ವಿಚಾರವಾಗಿ ದಂಪತಿ ಮಧ್ಯೆ ಮಂಗಳವಾರ ರಾತ್ರಿ ಜಗಳವಾಗಿದೆ. ಆಗ ಕೆರಳಿದ ರೆಡ್ಡಿ, ಊಟ ಮುಗಿಸಿ ಮಲಗಿದ ಬಳಿಕ ಪತ್ನಿ ಹಾಗೂ ಮಗಳನ್ನು ಹತ್ಯೆಗೈದು ತಾನು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾನೆ. ಬುಧವಾರ ನಸುಕಿನ 4ರ ಸುಮಾರಿಗೆ ಪತ್ನಿಯ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ಮಗಳಿಗೆ ಚಾಕುವಿನಿಂದ ಕುತ್ತಿಗೆ ಚುಚ್ಚಿದ್ದಾನೆ.

ಈ ಕೃತ್ಯ ಎಸಗಿದ ಬಳಿಕ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಕೊಲೆ ಮಾಡಿರುವ ವಿಷಯ ತಿಳಿಸಿದ ನಂತರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾನೆ.

ಅಷ್ಟರಲ್ಲಿ ಮಾಹಿತಿ ಪಡೆದು ಘಟನಾ ಸ್ಥಳಕ್ಕೆ ತೆರಳಿದ ಯಶವಂತಪುರ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಗಾಯಾಳು ಸಹನಾಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ. ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ತೀರ್ಥೋದ್ವವವನ್ನು ಕಣ್ತುಂಬಿಕೊಳ್ಳಲಿದ್ದಾರೆ ಡಿಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ

ನೂತನ ರಾಜ್ಯ ಮಾಹಿತಿ ಆಯುಕ್ತರಿಗೆ ಪ್ರಮಾಣ ವಚನ ಬೋಧಿಸಿದ ಥಾವರ್ ಚಂದ್ ಗೆಹ್ಲೋಟ್

ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ ಬ್ಲ್ಯಾಕ್‍ಮೇಲ್: ಛಲವಾದಿ ನಾರಾಯಣಸ್ವಾಮಿ

ಪ್ರಚೋದನಕಾರಿ ಭಾಷಣ ಮಾಡಿದ ಕನ್ನೇರಿ ಕಾಡಸಿದ್ಧೇಶ್ವರ ಶ್ರೀಗಳಿಗೆ ಬಿಗ್‌ಶಾಕ್

ನಿಷೇಧ ಆರ್ ಎಸ್ಎಸ್ ಗೆ ಮಾತ್ರನಾ, ಬೇರೆ ಧರ್ಮಕ್ಕೂ ಇದೆಯಾ: ಪ್ರಿಯಾಂಕ್ ಖರ್ಗೆ ಹೇಳಿದ್ದೇನು

ಮುಂದಿನ ಸುದ್ದಿ
Show comments