ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರನ್ನು ಸಿಎಂ ಆಗಿ ಆಯ್ಕೆ ಮಾಡಿದ ಸಂದರ್ಭದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ(ಸಿಎಲ್‌ಪಿ) ಅವರ ಅವಧಿಗೆ ಯಾವುದೇ ಸಮಯ ನಿಗದಿಪಡಿಸಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು.
ರಾಜ್ಯ ಸಿಎಂ ಕುರ್ಚಿ ಬದಲಾವಣೆ ಸಂಬಂಧ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿರುವ ಬಗ್ಗೆ ಇಂದು ಅವರು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
ಆದಾಗ್ಯೂ, ಪಕ್ಷದ ಪ್ರತಿಯೊಬ್ಬರೂ ಹೈಕಮಾಂಡ್ ನಿರ್ಧರಿಸುವ ಯಾವುದೇ ನಿರ್ಧಾರಕ್ಕೆ ಬದ್ಧರಾಗಿರುತ್ತಾರೆ ಮತ್ತು ಸಿಎಂ ಬದಲಾವಣೆ ಗೊಂದಲಕ್ಕೆ ಅಂತ್ಯ ಹಾಡಬೇಕೆಂದು ಕಾಂಗ್ರೆಸ್ ಹೈಕಮಾಂಡ್ ಗೆ ಒತ್ತಾಯಿಸಿದರು.
ಇನ್ನೂ ಈ ಭೇಟಿಯಲ್ಲಿ ನಾವು ರಾಜಕೀಯಕ್ಕೆ ಸಂಬಂಧಿಸಿದ ಯಾವುದೇ ಚರ್ಚೆ ನಡೆಸಿಲ್ಲ. ಆದರೆ ತುಮಕೂರಿನಲ್ಲಿ ಪರಮೇಶ್ವರ ನೇತೃತ್ವದ ಸಹಕಾರ ಸಂಘದ ಬಗ್ಗೆ ಚರ್ಚಿಸಿರುವುದಾಗಿ ಎಂದು ಹೇಳಿಕೊಂಡರು.
"ಮೇ 2023ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಬಹುಮತ ಗಳಿಸಿ ಅಧಿಕಾರಕ್ಕೆ ಬಂದ ನಂತರ, ಸಿಎಲ್‌ಪಿ ನಾಯಕ(ಸಿದ್ದರಾಮಯ್ಯ)ರನ್ನು ಎಲ್ಲಾ ಶಾಸಕರ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಆ ಸಂದರ್ಭಧಲ್ಲಿ ಸಿದ್ದರಾಮಯ್ಯ ಕೇವಲ 2.5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಲಾಗಿಲ್ಲ ಎಂದು ಹೇಳಿದರು.
ಸಿದ್ದರಾಮಯ್ಯ ಅವರನ್ನು ಸಿಎಲ್‌ಪಿ ನಾಯಕ ಎಂದು ಘೋಷಿಸುವಾಗ ಹೈಕಮಾಂಡ್ ಅವರ ಅಧಿಕಾರಾವಧಿಗೆ ಯಾವುದೇ ಸಮಯ ನಿಗದಿಪಡಿಸಿಲ್ಲ ಎಂದು ಸ್ಪಷ್ಟಪಡಿಸಿದರು.