ಗೃಹ ಖಾತೆ ಕೈತಪ್ಪುತ್ತಿರುವ ಬಗ್ಗೆ ನನಗೆ ಯಾವುದೇ ಬೇಸರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷನಾಗಿ ಮುಂದುವರೆಯಲು ನನಗೆ ಇನ್ನೊಂದು ಅವಕಾಶ ನೀಡಿದ ಹೈಕಮಾಂಡ್`ಗೆ ಕೃತಜ್ಞತೆ ಸಲ್ಲಿಸುತ್ತೇನೆ. ಗೃಹ ಖಾತೆ ಕೈತಪ್ಪಿದ್ದಕ್ಕೆ ನನಗೆ ಯಾವುದೇ ಬೇಸರವಿಲ್ಲ. ಗೃಹ ಖಾತೆಯಲ್ಲಿ ಹಲವು ಕೆಲಸ ಕಾರ್ಯಗಳು ಆಗಬೇಕಿತ್ತು ಎಂದಿದ್ದಾರೆ.
ಇದೇವೇಳೆ, ಗೃಹ ಖಾತೆಯನ್ನ ಯಾರಿಗೆ ಕೊಡುತ್ತಾರೋ ಗೊತ್ತಿಲ್ಲ. ಸಿಎಂ ಅವರೇ ಇಟ್ಟುಕೊಳ್ಳಬಹುದು ಎಂದು ಪರಮೇಶ್ವರ್ ಹೇಳಿದ್ದಾರೆ. ಬೆಳಗ್ಗೆಯಷ್ಟೇ ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರಾಗಿ ಪರಮೇಶ್ವರ್ ಮುಂದುವರಿಕೆ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್, ಕೂಡಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚಿಸಿತ್ತು. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಚಾರ ಸಮಿತಿ ಅಧ್ಯಕ್ಷ ಅಸ್ಥಾನ ನೀಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ