Select Your Language

Notifications

webdunia
webdunia
webdunia
webdunia

ರಾಜಕೀಯ ಚದುರಂಗದಾಟದ ನಡುವೆ ನನಗೆ ಸಿಎಂ ಆಗುವ ಅವಕಾಶ ಕೈತಪ್ಪಿದೆ- ಡಾ.ಜಿ.ಪರಮೇಶ್ವರ್ ಅಸಮಾಧಾನ

ರಾಜಕೀಯ ಚದುರಂಗದಾಟದ ನಡುವೆ ನನಗೆ ಸಿಎಂ ಆಗುವ ಅವಕಾಶ ಕೈತಪ್ಪಿದೆ- ಡಾ.ಜಿ.ಪರಮೇಶ್ವರ್ ಅಸಮಾಧಾನ
ತುಮಕೂರು , ಸೋಮವಾರ, 19 ಆಗಸ್ಟ್ 2019 (12:02 IST)
ತುಮಕೂರು : ಮುಖ್ಯಮಂತ್ರಿಯಾಗುವ ಅವಕಾಶ ಪದೇ ಪದೇ ಕೈ ತಪ್ಪಿದ್ದಕ್ಕೆ ಡಾ.ಜಿ.ಪರಮೇಶ್ವರ್ ಅವರು ಅಸಮಾಧಾನ ಹೊರಹಾಕಿದ್ದಾರೆ.




ತುಮಕೂರು ಜಿಲ್ಲೆ ಕೊರಟಗೆರೆಯಲ್ಲಿ ಮಾತನಾಡಿದ ಅವರು, ನನಗೆ 3 ಸಲ ಮುಖ್ಯಮಂತ್ರಿಯಾಗುವ ಅವಕಾಶವಿತ್ತು. ರಾಜಕೀಯ ಚದುರಂಗದಾಟದ ನಡುವೆ ನನಗೆ ಅವಕಾಶ ಕೈತಪ್ಪಿದೆ. ವಿಭಿನ್ನ ರೀತಿಯ ರಾಜಕೀಯ ನಡೆಗಳಿಂದ ನನಗೆ ಅವಕಾಶ ಕೈತಪ್ಪಿದೆ  ಎಂದು ಬೇಸರ ವ್ಯಕ್ತಪಡಿಸಿದ್ದಾರೆ.


ರಾಜ್ಯ ಸರ್ಕಾರಿ ಅಧಿಕಾರಿಗಳಿಗೆ ಉನ್ನತ ಸ್ಥಾನ ನೀಡಲು ಜಾತಿ ಪ್ರಮುಖ ಪಾತ್ರವಹಿಸುತ್ತದೆ. ಅಧಿಕಾರದಲ್ಲಿರುವ ರಾಜಕಾರಣಿಗಳ ಸಮುದಾಯಕ್ಕೆ ಆದ್ಯತೆ ನೀಡುವುದು ದುರ್ದೈವದ ಸಂಗತಿಯಾಗಿದೆ. ಸರ್ಕಾರ ನಡೆಸುವ ರಾಜಕಾರಣಿಗಳ ಮನಸ್ಸು ಬದಲಾಗಬೇಕು. ಹಾಗಾದರೆ ಮಾತ್ರ ಜಾತಿಯ ವ್ಯವಸ್ಥೆ ಬದಲಾಗಲು ಸಾಧ್ಯ ಎಂದು ಅವರು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಪರೇಷನ್ ಕಮಲ ತನಿಖೆ ಮಾಡುವುದಕ್ಕೆ ಸಿಬಿಐಗೆ ನೀಡಲಿ- ಸಿಎಂ ವಿರುದ್ಧ ಸಿದ್ದರಾಮಯ್ಯ ಕಿಡಿ