ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.
ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜಾಮೀನು ನೀಡಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರಾಕರಿಸಿದೆ.
ಇದೇ ಪ್ರಕರಣದಲ್ಲಿ ಎರಡನೇ ಬಾರಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ಊರ್ಜಿತ ಅಲ್ಲ ಎಂದು ಅರ್ಜಿ ವಜಾ ಮಾಡಿ ಕೋರ್ಟ್ ಆದೇಶ ಮಾಡಿದೆ.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆಗೆ ಬೆದರಿಕೆಯೊಡ್ಡಿ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದರು ಎಂಬುದು ತನಿಖೆಯಿಂದ ದೃಢಪಟ್ಟಿದೆ ಎಂದು ತನಿಖೆ ನಡೆಸಿದ್ದ ಸಿಐಡಿ ತಿಳಿಸಿತ್ತು.
40 ವರ್ಷದ ಸಂತ್ರಸ್ತೆ ಮೇಲೆ ಹಾಸನದ ಮಾಜಿ ಸಂಸದ ಅತ್ಯಾಚಾರ ಎಸಗಿದ್ದ ಆರೋಪದ ಬಗ್ಗೆ ಪ್ರತ್ಯೇಕ ಪ್ರಕರಣದ ತನಿಖೆ ನಡೆಸಿದ್ದ ಎಸ್‌ಐಟಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ 1,691 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿತ್ತು.
ಅತ್ಯಾಚಾರ ಪ್ರಕರಣದಲ್ಲಿ ಸಾಕ್ಷಿ ವೀಕ್ಷಣೆಗೆ ಕೋರ್ಟ್ ಅವಕಾಶ ನೀಡಿದ್ದು, ಅದರ ಬೆನ್ನಲ್ಲೇ, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಮತ್ತೊಂದು ಪ್ರಕರಣದಲ್ಲೂ ಜಾಮೀನು ಅರ್ಜಿ ವಜಾಗೊಂಡಿದೆ.