Select Your Language

Notifications

webdunia
webdunia
webdunia
Monday, 14 April 2025
webdunia

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಉಪನ್ಯಾಸಕನ ಚಳಿ ಬಿಡಿಸಿದ ಪೋಷಕರು

ಕಲಬುರಗಿ
ಕಲಬುರಗಿ , ಗುರುವಾರ, 7 ನವೆಂಬರ್ 2019 (10:32 IST)
ಕಲಬುರಗಿ : ಉಪನ್ಯಾಸಕನೊಬ್ಬ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಪಾಠ ಮಾಡುವ ಬದಲು ಲೈಂಗಿಕ ಕಿರುಕುಳ ನೀಡಿದ ಘಟನೆ ಕಲಬುರಗಿ ಶರಣಬಸವ  ವಿಶ್ವವಿದ್ಯಾಲಯದಲ್ಲಿ ಕಳೆದ ವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.




ಚಿನ್ನು ಬಿರಾಜಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಉಪನ್ಯಾಸಕ. ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಿಕಲ್ ವಿಭಾಗದ ಉಪನ್ಯಾಸಕನಾಗಿರುವ ಈತ ವಿದ್ಯಾರ್ಥಿನಿಯರ ಬಳಿ ಮೊಬೈಲ್ ನಂಬರ್ ಪಡೆದು ಅಸಭ್ಯ ಮೆಸೇಜ್ ಕಳುಹಿಸಿ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.


ಈ ಹಿನ್ನಲೆಯಲ್ಲಿ  ವಿದ್ಯಾರ್ಥಿನಿಯರ ಪೋಷಕರಿಗೆ ಈ ವಿಚಾರ ತಿಳಿದು  ಕಾಲೇಜಿಗೆ ಬಂದು ಉಪನ್ಯಾಸಕನ ಚಳಿ ಬಿಡಿಸಿದ್ದಾರೆ. ವಿದ್ಯಾರ್ಥಿನಿಯರಲ್ಲಿ ಉಪನ್ಯಾಸಕ ಚಿನ್ನು ಕ್ಷಮೆ ಕೇಳಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಾಗೇ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಆತನನ್ನು ಕೆಲಸದಿಂದ ಅಮಾನತು ಮಾಡಿದೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಗಾಂಜಾಕ್ಕೆ ಹಣ ಕೊಡದ ಬಾಲಕನನ್ನು ಬರ್ಬರವಾಗಿ ಕೊಲೆ ಮಾಡಿದ ದುಷ್ಕರ್ಮಿಗಳು