ಖಾಸಗಿ ಶಾಲೆಗಳ ಶುಲ್ಕಕ್ಕೂ ಕಟ್ಟುನಿಟ್ಟಿನ ಆದೇಶ ಹೊರಡಿಸ್ತಾರಾ ಸಚಿವ ಸುರೇಶ್ ಕುಮಾರ್?

Webdunia
ಶುಕ್ರವಾರ, 12 ಜೂನ್ 2020 (09:50 IST)
ಬೆಂಗಳೂರು: 1 ರಿಂದ 5 ನೇ ತರಗತಿವರೆಗಿನ ಮಕ್ಕಳಿಗೆ ಆನ್ ಲೈನ್ ಶಿಕ್ಷಣಕ್ಕೆ ಬ್ರೇಕ್ ಹಾಕಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಪೋಷಕರು ಶಾಲೆಗಳ ಶುಲ್ಕ ಕಡಿಮೆ ಮಾಡಲು ಕಟ್ಟುನಿಟ್ಟಿನ ಆದೇಶ ನೀಡಿ ಎಂಬ ಒತ್ತಾಯ ಕೇಳಿಬರುತ್ತಿದೆ.

 
ಆನ್ ಲೈನ್ ಶಿಕ್ಷಣ ನಡೆಸದಂತೆ ತಜ್ಞರ ಅಭಿಪ್ರಾಯದ ಮೇರೆಗೆ ಸಚಿವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಹಾಗಾಗಿ ಸದ್ಯಕ್ಕಂತೂ ಆನ್ ಲೈನ್ ಶಿಕ್ಷಣ ನೀಡುತ್ತೇವೆಂಬ ನೆಪದಲ್ಲಿ ಖಾಸಗಿ ಶಾಲೆಗಳಿಗೆ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಹಾಗಿಲ್ಲ.

ಶಾಲೆ ಆರಂಭಿಸಲು ಸರ್ಕಾರ ಆದೇಶಿಸುವಾಗಿ ಸೆಪ್ಟೆಂಬರ್ ಆದರೂ ಅಚ್ಚರಿಯಿಲ್ಲ. ಅಂದರೆ ಬರೋಬ್ಬರಿ ಈ ಶೈಕ್ಷಣಿಕ ವರ್ಷದಲ್ಲಿ ಎರಡು-ಮೂರು ತಿಂಗಳು ಶಾಲೆ ಕಟ್ ಆಗುವುದಂತೂ ಪಕ್ಕಾ. ಆದರೆ ಖಾಸಗಿ ಶಾಲೆಗಳು ಶಾಲೆ ಆರಂಭ ಯಾವಾಗ ಎಂದೇ ಗೊತ್ತಿಲ್ಲದೇ ಹೋದರೂ ವರ್ಷದ ಪೂರ್ತಿ ಶುಲ್ಕವನ್ನು ವಸೂಲಿ ಮಾಡಲು ಈಗಾಗಲೇ ಶುರು ಮಾಡಿಕೊಂಡಿವೆ.

ಇದಕ್ಕೆ ಬ್ರೇಕ್ ಹಾಕಬೇಕು ಮತ್ತು ಈ ವರ್ಷ ಪೂರ್ತಿ ಶಾಲೆ ನಡೆಯದೇ ಇರುವ ಕಾರಣಕ್ಕೆ ಶುಲ್ಕ ಕಡಿತ ಮಾಡಲು ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ. ಈ ಬಗ್ಗೆಯೂ ಸಚಿವರು ಮುಂದಿನ ದಿನಗಳಲ್ಲಿ ಗಮನಹರಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments