ತಳವಾರ , ಪರಿವಾರ ಹಾಗೂ ಕಾರವಾರ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯಲ್ಲಿರುವ ಸಿದ್ದಿ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ.
ಈ ಕುರಿತು ಕೇಂದ್ರ ಸರ್ಕಾರದ ಗೆಜೆಟ್ ಅಧಿಸೂಚನೆಯ ಅನುಸಾರ ರಾಜ್ಯದಲ್ಲೂ ಗೆಜೆಟ್ ಅಧಿಸೂಚನೆ ಹೊರಡಿಸಲು ಆದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.
ಕುಲಶಾಸ್ತ್ರಿ ಅಧ್ಯಯನದಂತೆ ಪರಿವಾರ ಮತ್ತು ತಳವಾರ ಜಾತಿಗಳು ನಾಯಕ ಮತ್ತು ನಾಯಿಕಡದ ಪರ್ಯಾಯವಾಗಿವೆ. ಈ ಪ್ರಸ್ತಾವನೆಯು ಕಳೆದ ಹಲವಾರು ದಶಕಗಳಿಂದ ಬೇಡಿಕೆಯಲ್ಲಿತ್ತು. ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಎಲ್ಲಾ ಪೂರಕ ಮಾಹಿತಿಯನ್ನು ಸಲ್ಲಿಸಲಾಯಿತು.
ಕೇಂದ್ರ ಸರ್ಕಾರವು ಈ ಪ್ರಸ್ತಾವನೆಯನ್ನು ಸಂಸತ್ ನಲ್ಲಿ ಅಂಗೀಕರಿಸಿ, ಗೆಜೆಟ್ ಅಧಿಸೂಚನೆ ಹೊರಡಿಸಿದ ಆಧಾರದಡಿ, ರಾಜ್ಯ ಸರ್ಕಾರವು ಗೆಜೆಟ್ ಪ್ರಕಟಣೆಯನ್ನು ಹೊರಡಿಸುವಂತೆ ಆದೇಶಿಸಲಾಗಿದೆ. ಈ ಅಧಿಸೂಚನೆಯಂತೆ ಈ ಸಮುದಾಯದವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ನೀಡಲು ಅವಕಾಶವಿರುತ್ತದೆ.