Publish Date: Mon, 19 Feb 2018 (10:50 IST)
Updated Date: Mon, 19 Feb 2018 (10:53 IST)
ಬೆಂಗಳೂರು : ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ನಿಧನದ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಸಂತಾಪ ಸೂಚಿಸಿದ್ದಾರೆ.
‘ರೈತಪರ ಹೋರಾಟವನ್ನೇ ಜೀವನವಾಗಿಸಿಕೊಂಡಿದ್ದ ನಾಯಕ. ಇಂತಹ ನಾಯಕರೊಬ್ಬರನ್ನು ಈ ನಾಡು ಕಳೆದುಕೊಂಡಿದೆ. ರೈತಪರ ಹೋರಾಟಕ್ಕೆ ಕೆ.ಎಸ್.ಪುಟ್ಟಣ್ಣಯ್ಯರ ಕೊಡುಗೆ ಅಪಾರ. ಸರಳ ಸಜ್ಜನಿಕೆಯ ನೇರ ನುಡಿಯ ವ್ಯಕ್ತಿತ್ವ ಹೊಂದಿದ್ದ ಶಾಸಕ. ಇವರ ಅಗಲಿಕೆ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟ. ಅವರ ಆತ್ಮಕ್ಕೆ ಶಾಂತಿ ದೊರಕಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ