Publish Date: Tue, 16 Oct 2018 (13:30 IST)
Updated Date: Tue, 16 Oct 2018 (13:32 IST)
ಬೆಂಗಳೂರು : ಕಾಂಗ್ರೆಸ್ ಗೆ ದೊಡ್ಡ ಶಾಕ್ ಕಾದಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಇದೀಗ ಡಿಸಿಎಂ ಪರಮೇಶ್ವರ್ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,’ ನಾವು ನೀವು ಕಾದು ನೋಡೋಣ, ಶಾಕ್ ನಮಗಾಗುತ್ತೋ ಅಥವಾ ಅವರಿಗಾಗುತ್ತದೆಯೋ. ಯಡಿಯೂರಪ್ಪ ಹಿರಿಯ ರಾಜಕಾರಣಿ ಮತ್ತೊಮ್ಮೆ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ. ಆದರೆ ಎಷ್ಟೇ ಪ್ರಯತ್ನ ನಡೆಸಿದರೂ ವಿಫಲವಾಗುತ್ತಿದೆ ಎಂದು ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಬೀಳಿಸೋಕೆ ಸಾಧ್ಯವಿಲ್ಲ. ನಾವು 5 ವರ್ಷ ಅಧಿಕಾರ ಪೂರೈಸುತ್ತೇವೆ. ರಾಜ್ಯದ ಜನರಿಗೆ ಅಭಿವೃದ್ಧಿ ಮಾಡೋಕೆ ಮಾತು ಕೊಟ್ಟಿದ್ದೇವೆ ಅದರಂತೆ ನಡೆಯುತ್ತೇವೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.