ನಿಗಮ ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಪ್ರಾಮಾಣಿಕರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ನೇಮಕಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಸಮಾಲೋಚನೆ ಮಾಡಲಾಗುತ್ತದೆ ಎಂದು ಹೇಳಿದರು.
ನಿಗಮ ಮಂಡಳಿ ಅಧ್ಯಕ್ಷ ಸ್ಥಾನದ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ. ಪಕ್ಷದ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಪ್ರಾಮಾಣಿಕರಿಗೆ ಮನ್ನಣೆ ನೀಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯ ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ನಿಗಮ ಮಂಡಳಿಯ ಹಾಲಿ ಅಧ್ಯಕ್ಷರ ಅಧಿಕಾರಾವಧಿ ಅಗಸ್ಟ್ 23 ರಂದು ಮುಕ್ತಾಯವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೂತನ ಅಧ್ಯಕ್ಷರ ಪಟ್ಟಿ ಬಿಡುಗಡೆ ಮಾಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ