Webdunia - Bharat's app for daily news and videos

Install App

ಪಕ್ಷ ವಿರೋಧಿಗಳಿಂದ ಚಿತ್ರ ಹಿಂಸೆ: ದೇವೇಗೌಡರ ವಿಷಾದ

Webdunia
ಬುಧವಾರ, 8 ಜೂನ್ 2016 (13:13 IST)
ಪಕ್ಷ ವಿರೋಧಿಗಳು ನನಗೆ ಕೊಡಬಾರದ ಚಿತ್ರ ಹಿಂಸೆ ಕೊಟ್ಟಿದ್ದಾರೆ. ಇದರಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡ ಬೇಸರ ವ್ಯಕ್ತಪಡಿಸಿದ್ದಾರೆ. 
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೆಗೌಡ, ಎರಡು ರಾಷ್ಟ್ರೀಯ ಪಕ್ಷಗಳಿಂದ ಪ್ರಾದೇಶಿಕ  ಜೆಡಿಎಸ್ ಪಕ್ಷವನ್ನು ತುಳಿಯುವ ಪ್ರಯತ್ನ ನಡೆಯುತ್ತಿದೆ. ರಾಜ್ಯಸಭೆ ಜುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಮೂಲಕ ಕುದುರೆ ವ್ಯಾಪರ ನಡೆಸುತ್ತಿದ್ದಾರೆ. ಆದರೆ, ಅವರು ಕುದುರೆ ವ್ಯಾಪಾರ ನಡೆಸಿ ಗೆಲ್ಲುತ್ತಾರೂ ಅಥವಾ ಕತ್ತೆ ವ್ಯಾಪಾರ ಮಾಡಿ ಗೆಲ್ಲುತ್ತಾರೆ ನೋಡೋಣ ಎಂದು ಹೇಳಿದ್ದಾರೆ.
 
ಪಕ್ಷ ವಿರೋಧಿಗಳು ನನಗೆ ಚಿತ್ರ ಹಿಂಸೆ ಕೊಟ್ಟಿದ್ದಾರೆ. ಇದರಿಂದ ನನಗೆ ಮತ್ತು ನನ್ನ ಪುತ್ರ ಎಚ್.ಡಿ.ಕುಮಾರಸ್ವಾಮಿ ಮನಸ್ಸಿಗೆ ತುಂಬಾ ನೋವಾಗಿದೆ. ಪಕ್ಷದಲ್ಲಿ ಇಷ್ಟೆಲ್ಲಾ ನಡೆಯುತ್ತಿದ್ದರು ಯಾಕೆ ನೀವು ಸುಮ್ಮನಿದ್ದೀರಿ ಎಂದು ಕಾರ್ಯಕರ್ತರು ನನ್ನನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು.
 
ಪಕ್ಷದಲ್ಲಿ ನಾಲ್ಕು ಐದು ಭಿನ್ನಮತಿಯರನ್ನು ಬಿಟ್ಟರೆ ಉಳಿದ ಎಲ್ಲಾ ಶಾಸಕರು ನಮ್ಮ ಜೊತೆಯಲ್ಲಿದ್ದಾರೆ. ರಾಜ್ಯಸಭೆ ಚುನಾವಣೆಯಲ್ಲಿ ಶಾಸಕರು ಅಡ್ಡ ಮತದಾನ ಮಾಡಿದರೆ, ಜೂನ್ 12 ರಂದು ನಡೆಯುವ ಮಹತ್ವದ ಸಭೆಯಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಭಿನ್ನಮತಿಯರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan:ರಾತ್ರಿಯಾಗುತ್ತಿದ್ದಂತೇ ಪಾಕಿಸ್ತಾನದಿಂದ ಮತ್ತೆ ದಾಳಿ ಶುರು, 3 ರಾಜ್ಯ ಟಾರ್ಗೆಟ್

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

ಮುಂದಿನ ಸುದ್ದಿ
Show comments