Select Your Language

Notifications

webdunia
webdunia
webdunia
webdunia

ಮುಂಜಾನೆವರೆಗೂ ಪಾರ್ಟಿ; ಪಬ್ ವಿರುದ್ಧ FIR

pub

geetha

bangalore , ಶನಿವಾರ, 6 ಜನವರಿ 2024 (17:01 IST)
ಬೆಂಗಳೂರು-ಸರ್ಕಾರದ ನಿಯಮದ ಪ್ರಕಾರ ಮಧ್ಯರಾತ್ರಿ 1 ಗಂಟೆಗೆ ಪಬ್​ಗಳು ಕ್ಲೋಸ್ ಆಗಬೇಕು. ಆದರೆ, ಬೆಂಗಳೂರಿನಲ್ಲಿ ಸ್ಟಾರ್ ಹೀರೋ ಪಾರ್ಟಿ ನಡೆಸೋದಕ್ಕಾಗಿ ಮುಂಜಾನೆ 5ರವರೆಗೆ ಪಬ್ ಓಪನ್ ಇಡಲಾಗಿತ್ತು. ಇತ್ತೀಚೆಗೆ ರಿಲೀಸ್ ಆಗಿ ಸಕ್ಸಸ್ ಕಂಡ ಸಿನಿಮಾದ ಹೀರೋ ಹಾಗೂ ತಂಡದವರು ಈ ಪಾರ್ಟಿಯಲ್ಲಿದ್ದರು ಎನ್ನಲಾಗಿದೆ. ಸ್ಟಾರ್ ಹೀರೋ ಎನ್ನುವ ಕಾರಣಕ್ಕೆ ಪೊಲೀಸರು ಕಣ್ಮುಚ್ಚಿ ಕುಳಿತರಾ ಎನ್ನುವ ಪ್ರಶ್ನೆ ಮೂಡಿದೆ. ಈಗ ಪಬ್​ ಮಾಲೀಕರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಇತ್ತೀಚೆಗಷ್ಟೇ ಆ ಸ್ಟಾರ್ ನಟನ‌ ಚಿತ್ರ ಬಿಡುಗಡೆಯಾಗಿತ್ತು. ಅದರ‌ ಸಕ್ಸಸ್ ಸೆಲೆಬ್ರೇಷನ್ ಬಳಿಕ ಪಬ್​ನಲ್ಲಿ ಸ್ಟಾರ್ಸ್ ಪಾರ್ಟಿಗೆ ಸೇರಿದ್ದರು. ಬೆಂಗಳೂರಿನ ಒರಾಯನ್‌ ಮಾಲ್ ಬಳಿ ಇರುವ ಜೆಟ್ ಲ್ಯಾಗ್ ಪಬ್​​ನಲ್ಲಿ ಪಾರ್ಟಿ ನಡೆದಿತ್ತು. ನಟ, ನಿರ್ದೇಶಕ, ನಿರ್ಮಾಪಕ ಸೇರಿದಂತೆ ಹಲವು ಸೆಲೆಬ್ರಿಟಿಗಳು ಪಾರ್ಟಿಯಲ್ಲಿ ಭಾಗಿ ಆಗಿದ್ದರು. ಜನವರಿ‌ 3ರಂದು‌ ರಾತ್ರಿ‌ ಪಬ್​ಗೆ ಸಿನಿಮಾ ತಂಡ ಆಗಮಿಸಿದ ಸಿಸಿಟಿವಿ ದೃಶ್ಯ ವೈರಲ್ ಆಗಿದೆ.ನಿಯಮಗಳ ಪ್ರಕಾರ ರಾತ್ರಿ 1 ಗಂಟೆಗೆ ಪಬ್ ಕ್ಲೋಸ್ ಆಗಬೇಕಿತ್ತು. ಒಂದು ಗಂಟೆ ಆಗುತ್ತಿದ್ದಂತೆ ಪಾರ್ಟಿ ಪೂರ್ಣಗೊಳಿಸಬೇಕಿತ್ತು. ಆದರೆ, ಮುಂಜಾನೆವರೆಗೂ ಪಾರ್ಟಿ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್​ ಬೆದರಿಕೆ