Publish Date: Thu, 13 Apr 2023 (19:47 IST)
Updated Date: Thu, 13 Apr 2023 (19:49 IST)
ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳ್ಳುತ್ತಿದ್ದಂತೆ ಟಿಕೆಟ್ ಕೈ ತಪ್ಪಿದ ಕೆಲವು ಹಾಲಿ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಬಾರಿ ಕೆಲವರಿಗೆ ಪಕ್ಷ ಟಿಕೆಟ್ ನೀಡಿಲ್ಲ, ಅವರಿಗೆ ಬೇರೆ ಜವಾಬ್ದಾರಿ ನೀಡಲಾಗುತ್ತದೆ. ಇದರರ್ಥ ಕೇಂದ್ರಕ್ಕೂ ಕರೆಸಿಕೊಳ್ಳಬಹುದು. ಹಾಗಾಗಿ ಪರಿವರ್ತನೆಗೆ ಯಾರೂ ಬೇಸರಗೊಳ್ಳಬೇಡಿ ಎಂದು ರಾಜ್ಯ ಚುನಾವಣೆ ಸಹ ಉಸ್ತುವಾರಿ ಅಣ್ಣಾಮಲೈ ತಿಳಿಸಿದರು....ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ಕುರಿತು ರಾಜ್ಯದಲ್ಲಿ ಜಿಲ್ಲಾ ಸಮಿತಿಗಳಿಂದ ಅಭಿಪ್ರಾಯ ಸಂಗ್ರಹಿಸಿ ರಾಜ್ಯ ಸಮಿತಿಯಲ್ಲಿ ಚರ್ಚಿಸಿ ಕೇಂದ್ರಕ್ಕೆ ಶಿಫಾರಸು ಮಾಡಲಾಗಿತು. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿಯೂ ಸಭೆ ಮಾಡಿ ಟಿಕೆಟ್ ನೀಡಲಾಗಿದೆ ಎಂದ್ರು