ಪ್ಯಾಸೆಂಜರ್ ರೈಲು ಸಂಚಾರ ಆರಂಭ

Webdunia
ಸೋಮವಾರ, 5 ಜೂನ್ 2023 (21:31 IST)
ಒಡಿಶಾದ ಬಾಲಸೋರ್‌ನಲ್ಲಿ ತ್ರಿವಳಿ ರೈಲು ಅಪಘಾತದಿಂದ ಹಾನಿಗೊಳಗಾಗಿದ್ದ ಹಳಿಯನ್ನು ದುರಸ್ತಿ ಮಾಡಲಾಗಿದ್ದು, ಪ್ಯಾಸೆಂಜರ್ ರೈಲು ಸಂಚಾರವನ್ನು ರೈಲ್ವೆ ಇಲಾಖೆ ಆರಂಭಿಸಿದೆ. ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರಂತರ ಶ್ರಮದಿಂದ ಹಾನಿಗೊಳಗಾಗಿದ್ದ ಮಾರ್ಗವನ್ನು ಬೇಗ ದುರಸ್ತಿ ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಟ್ವಿಟ್ ಮೂಲಕ ತಿಳಿಸಿದ್ದರು. ಅದರಂತೆ, ಬೆಂಗಳೂರು ಹೌರಾ ಎಕ್ಸ್‌ಪ್ರೆಸ್ ರೈಲು ಅಪಘಾತಕ್ಕೀಡಾದ ಮಾರ್ಗದಲ್ಲಿ ಭಾನುವಾರ ರಾತ್ರಿ 10.40ಗಂಟೆಗೆ ವಿಶಾಖಪಟ್ಟಣದ ಬಂದರಿನಿಂದ ಕಲ್ಲಿದ್ದಲು ತುಂಬಿದ್ದ ಗೂಡ್ಸ್‌ ರೈಲು ರೂರ್ಕೆಲಾ ಸ್ಟೀಲ್‌ ಪ್ಲಾಂಟ್‌ನತ್ತ ಸಂಚರಿಸಿತ್ತು. ತ್ರಿವಳಿ ರೈಲು ಅಪಘಾತ ಸಂಭವಿಸಿದ 51 ಗಂಟೆಗಳ ಬಳಿಕ ಈ ಮಾರ್ಗದಲ್ಲಿ ಸಂಚರಿಸಿದ ಮೊದಲ ರೈಲು ಇದಾಗಿತ್ತು. ಇಂದು ಬೆಳಿಗ್ಗೆ ಪ್ಯಾಸೆಂಜರ್ ರೈಲು ಸಹ ಸಂಚರಿಸಿದೆ.. ಅಪಘಾತದಲ್ಲಿ ಒಟ್ಟು 275 ಮಂದಿ ಮೃತಪಟ್ಟಿದ್ದು, 200 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ. ಡಿಎನ್‌ಎ ಪರಿಶೀಲನೆಗೆ ಅಧಿಕಾರಿಗಳು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಬಾರಿ ಬೇಸಿಗೆ ಹೇಗಿರಲಿದೆ, ಹವಾಮಾನ ತಜ್ಞರ ಎಚ್ಚರಿಕೆ ಗಮನಿಸಿ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಮುಂದಿನ ಸುದ್ದಿ
Show comments