Publish Date: Sat, 22 Dec 2018 (16:15 IST)
Updated Date: Sat, 22 Dec 2018 (16:18 IST)
ಹಾವೇರಿ ಜಿಲ್ಲೆಯ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ದೊರಕಿಲ್ಲ. ಇದರಿಂದಾಗಿ ಮನನೊಂದ ಪಾಟೀಲ್ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಸಚಿವ ಸಂಪುಟದಲ್ಲಿ ಶಾಸಕ ಬಿ.ಸಿ ಪಾಟೀಲ್ ಅವರಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಮನನೊಂದು ಪಾಟೀಲ್ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ವಾಟರ್ಟ್ಯಾಂಕ್ ಹತ್ತಿದ ಬೆಂಬಲಿಗ, ಅಲ್ಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಹಾಕಿದ್ದನು. ವಿಷಯ ತಿಳಿದ ಪೊಲೀಸರು ಹಾಗೂ ಪಾಟೀಲ್ ಅಭಿಮಾನಿಗಳು ಸ್ಥಳಕ್ಕಾಗಮಿಸಿ ಮನವೊಲಿಸುವಲ್ಲಿ ಯಶಸ್ವಿಯಾದರು.
ಬಿ.ಸಿ ಪಾಟೀಲ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅವರ ಪುತ್ರಿ ಸೃಷ್ಠಿ ಪಾಟೀಲ್ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ. ಪಕ್ಷಕ್ಕೆ ನಿಷ್ಠೆ ತೋರಿಸಿರುವುದಕ್ಕೆ ಕಾಂಗ್ರೆಸ್ ನೀಡುತ್ತಿರುವ ಶಿಕ್ಷೆ ಇದೇನಾ ಎಂದು ಪ್ರಶ್ನಿಸಿದ್ದಾರೆ.