Select Your Language

Notifications

webdunia
webdunia
webdunia
webdunia

ಈ ಬಾರಿ ಕರ್ನಾಟಕ ಚುನಾವಣೆಯಲ್ಲಿ ನಟ ಪವನ್ ಕಲ್ಯಾಣ ಅವರು ಯಾವ ಪಕ್ಷದ ಪರ ಪ್ರಚಾರಕ್ಕೆ ಇಳಿಯಲಿದ್ದಾರಂತೆ?

ಈ ಬಾರಿ ಕರ್ನಾಟಕ ಚುನಾವಣೆಯಲ್ಲಿ ನಟ ಪವನ್ ಕಲ್ಯಾಣ ಅವರು ಯಾವ ಪಕ್ಷದ ಪರ ಪ್ರಚಾರಕ್ಕೆ ಇಳಿಯಲಿದ್ದಾರಂತೆ?
ಬೆಂಗಳೂರು , ಸೋಮವಾರ, 19 ಮಾರ್ಚ್ 2018 (06:56 IST)
ಬೆಂಗಳೂರು : ತೆಲುಗಿನ ಖ್ಯಾತ ನಟ ಪವನ್ ಕಲ್ಯಾಣ ಅವರು ಹಿಂದಿನ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದು, ಆದರೆ ಈ ಬಾರಿ ಬಿಜೆಪಿ ಸರ್ಕಾರದ ಮೇಲಿನ ಬೇಸರದಿಂದಾಗಿ ಬಿಜೆಪಿ ಬಿಟ್ಟು ಜೆಡಿಎಸ್ ಪರ ಪ್ರಚಾರಕ್ಕೆ ಇಳಿದಿದ್ದಾರೆ.


ಈ ಹಿಂದೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಪವನ್ ಕಲ್ಯಾಣ ಅವರನ್ನು ಮೂರ್ನಾಲ್ಕು ಬಾರಿ ಭೇಟಿ ಮಾಡಿ ಜೆಡಿಎಸ್ ಪರ ಪ್ರಚಾರಕ್ಕೆ ಬರುವಂತೆ ಮನವಿಮಾಡಿಕೊಂಡ ಹಿನ್ನಲೆಯಲ್ಲಿ ಇದೀಗ ಅವರು ಜೆಡಿಎಸ್ ಪರ ಪ್ರಚಾರಕ್ಕೆ ಇಳಿದಿದ್ದಾರೆ. ತೆಲುಗು ಭಾಷಿಕರು ಹೆಚ್ಚಾಗಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಪವನ್ ಕಲ್ಯಾಣ ಅವರು ಪ್ರಚಾರ ಮಾಡಲಿದ್ದು, ಇವರಿಗೆ ಕುಮಾರಸ್ವಾಮಿ ಅವರ ಪುತ್ರ ಸಿನಿಮಾ ನಟ ನಿಖಿಲ್ ಕುಮಾರಸ್ವಾಮಿ ಅವರು ಸಾಥ್ ನೀಡಲಿದ್ದಾರೆ ಎಂದು ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ ಅಣ್ಣಾ ಹಝಾರೆ