Select Your Language

Notifications

webdunia
webdunia
webdunia
webdunia

ಪೇ ಸಿಎಂ ಆಯ್ತು ಈಗ ಪೇ ಮೇಯರ್

ಪೇ ಸಿಎಂ ಆಯ್ತು ಈಗ ಪೇ ಮೇಯರ್
ಬೆಂಗಳೂರು , ಬುಧವಾರ, 28 ಸೆಪ್ಟಂಬರ್ 2022 (14:11 IST)
ಪೇ ಸಿಎಂ ಚರ್ಚೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಪೇ ಮೇಯರ್ ಅಭಿಯಾನದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಂಡ್ಯ ರೈತರಿಂದ 'ಪೇ ಫಾರ್ಮರ್‌' ಅಭಿಯಾನ ಶುರು ಮಾಡಲಾಗಿತ್ತು. ಜಿಲ್ಲೆಯ ಸಂಜಯ್ ವೃತ್ತದಲ್ಲಿ ರೈತರು ಅಭಿಯಾನ ಕೈಗೊಂಡಿದ್ದು, ಒಂದು ಟನ್ ಕಬ್ಬಿಗೆ 4,500 ರೂಪಾಯಿ‌ ನಿಗದಿ ಮಾಡುವಂತೆ ರೈತರು ಒತ್ತಾಯಿಸಿದ್ದರು. ಇಲ್ಲದಿದ್ದರೆ ದಸರಾದಲ್ಲಿ ಹೆದ್ದಾರಿ ತಡೆದು ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಯುವ ರೈತ ನಾಯಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಅಭಿಯಾನ ಮಾಡಿದ್ದು, ಸಕ್ಕರೆ ನಾಡಿನಲ್ಲಿ ಅಭಿಯಾನ ತೀವ್ರತೆ ಪಡೆದುಕೊಂಡಿತ್ತು.
 
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರೈತರು ಪೋಸ್ಟ್ ಹಿಡಿದು ನಿಂತ್ತಿದ್ದು, ಕೆಎಸ್‌ಆರ್‌ಟಿಸಿ, ಐರಾವತ, ರಾಜಹಂಸ ಬಸ್​ಗಳನ್ನು ತಡೆದು 'ಪೇ ಫಾರ್ಮರ್‌' ಪೋಸ್ಟ್ ಅಂಟಿಸಿದ್ದರು. ಜೊತೆಗೆ ಸರ್ಕಾರದ ವಿರುದ್ದ ಘೋಷಣೆ ಕೂಗಿ ರೈತರು ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಕೆಂಪೂಗೌಡ, ಮಧುಚಂದನ್, ಪ್ರಸನ್ನಗೌಡ, ಸೇರಿದಂತೆ ಹಲವರು ಭಾಗಿ ಆಗಿದ್ದರು.
 
ಅಷ್ಟೇ ಅಲ್ಲದೇ ನಾವು ಏನು ಕಡಿಮೆ ಇಲ್ಲವೆಂಬಂತೆ ತೋರಿಸಲು ಬಿಜೆಪಿಯವರು ಕೂಡ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ. ಇದರಿಂದ ಬೇಸತ್ತ ಜನರು ರಾಜಕಾರಣಿಗಳ ವಿರುದ್ಧ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಧ್ವಂಸಕ ಕೃತ್ಯಗಳಿಗೆ ಅವಕಾಶವಿಲ್ಲ: ಬೊಮ್ಮಾಯಿ