ಬಿಡಿಎ ಬ್ರೋಕರ್ ಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ -ಎಸ್ ಆರ್ ವಿಶ್ವನಾಥ್
Publish Date: Wed, 23 Mar 2022 (14:38 IST)
Updated Date: Wed, 23 Mar 2022 (14:41 IST)
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಬ್ರೋಕರ್ ಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಪ್ರಾಧಿ ಕಾರದ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಬೆಂಗಳೂರಿನಲ್ಲಿ ಇಂದು ಹೇಳಿದ್ದಾರೆ. ಬಿಡಿಎ ಮತ್ತು ಸಾರ್ವಜನಿಕರಿಗೆ ವಂಚನೆ ಮಾಡಿ ನಷ್ಟವನ್ನು ಉಂಟು ಮಾಡುವ ಬ್ರೋಕರ್ ಗಳ ಮೇಲೆ ದಾಳಿ ನಡೆಸಿರುವುದು ಸ್ವಾಗತಾರ್ಹ.
ಬಿಡಿಎ ಅಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡ ತಕ್ಷಣ, ಬಿಡಿಎ ಆವರಣದೊಳಕ್ಕೆ ಏಜೆಂಟರಿಗೆ ನಿರ್ಬಂಧ ವಿಧಿಸುವ ಮೂಲಕ ಸಂಸ್ಥೆಗೆ ಒಳ್ಳೆಯ ಹೆಸರನ್ನು ತರುವ ಪ್ರಯತ್ನ ನಡೆಸಿದ್ದೇನೆ. ಇದಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಂಪೂರ್ಣ ಬೆಂಬಲ ನೀಡುತ್ತಿದ್ದಾರೆ. ಅಲ್ಲದೇ, ಏಜೆಂಟರ್ ಗಳ ಹಾವಳಿ ತಪ್ಪಿಸುವ ನಿಟ್ಟಿನಲ್ಲಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲು ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ ಎಂದು ವಿಶ್ವನಾಥ್ ತಿಳಿಸಿದರು.
ಮುಂದಿನ ಸುದ್ದಿ