ರಾಜಧಾನಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್ಗೆ ಪಾದಚಾರಿಯೊಬ್ಬರು ಬಲಿಯಾದ ದಾರುಣ ಘಟನೆ ನವರಂಗ್ ಸಿಗ್ನಲ್ ಬಳಿ ನಿನ್ನೆ ನಡೆದಿದೆ. ಮೃತ ಪಾದಚಾರಿಯನ್ನು ಕೃಷ್ಣಪ್ಪ ಎಂದು ಗುರುತಿಸಲಾಗಿದೆ. ಯು ಟರ್ನ್ ತೆಗೆದುಕೊಳ್ಳುವಾಗ ಕಾರೊಂದು ಕೃಷ್ಣಪ್ಪ ಅವರಿಗೆ ಡಿಕ್ಕಿ ಹೊಡೆದಿದ್ದು, ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದಾನೆ. ಡಿಕ್ಕಿ ರಭಸಕ್ಕೆ ರಸ್ತೆಗೆ ಬಿದ್ದ ಕೃಷ್ಣಪ್ಪ ತಲೆಗೆ ಬಲವಾದ ಪೆಟ್ಟುಬಿದ್ದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ರಾಜಾಜಿನಗರ ಸಂಚಾರಿ ಪೊಲೀಸರು, ಪರಾರಿಯಾಗಿದ್ದ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.