Publish Date: Sun, 29 Dec 2019 (09:55 IST)
Updated Date: Sun, 29 Dec 2019 (09:56 IST)
ಉಡುಪಿ:ಪೇಜಾವರ ಅಧೋಕ್ಷಜ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ವಿಧಿವಶರಾಗಿದ್ದಾರೆ ಎಂದು ಪೇಜಾವರ ಮಠ ಬೆಳಿಗ್ಗೆ ಘೋಷಿಸಿದೆ.
ಶ್ರೀಗಳ ಆಸೆಯಂತೆ ಅವರನ್ನು ಆಸ್ಪತ್ರೆಯಿಂದ ಪೇಜಾವರ ಮಠದಲ್ಲಿರುವ ಅಧೋಕ್ಷಜ ಮಠಕ್ಕೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿಯೇ ಅವರಿಗೆ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಶ್ರೀಗಳು ವಿಧಿವಶರಾಗಿದ್ದಾರೆ.
ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.ನಂತರ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.