Publish Date: Thu, 26 Oct 2017 (10:24 IST)
Updated Date: Thu, 26 Oct 2017 (10:27 IST)
ಉಡುಪಿ: ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಗಳು ಅನಾರೋಗ್ಯ ಹಿನ್ನಲೆಯಲ್ಲಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ವಾಮೀಜಿಗಳಿಗೆ ಹರ್ನಿಯಾ ಸಮಸ್ಯೆಯಿದ್ದು, ಅದಕ್ಕಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಇದೀಗ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಹೆಚ್ಚಿನ ತಪಾಸಣೆಯ ನಂತರರವಷ್ಟೇ ಅವರರ ಆರೋಗ್ಯದ ಬಗ್ಗೆ ನಿಖರ ಮಾಹಿತಿ ಸಿಗಲಿದೆ. ಆದರೆ ಸಮಸ್ಯೆ ಗಂಭೀರವಲ್ಲ, ಭಕ್ತರು ಆತಂಕಪಡುವ ಅಗತ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ