Publish Date: Sat, 06 May 2023 (17:25 IST)
Updated Date: Sat, 06 May 2023 (17:28 IST)
ಪ್ರಧಾನಿ ಮೋದಿ ರೋಡ್ ಶೋನಿಂದ ಜನರಿಗೆ ತೊಂದರೆಯೇ ಹೊರತು ಬಿಜೆಪಿಗೆ ಅದರಿಂದ ಏನು ಲಾಭ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ H.D. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಹನೂರಿನಲ್ಲಿ ಮಾತನಾಡಿದ HDK, ಮೋದಿ ಜನರಿಗೆ ತೊಂದರೆ ಕೊಟ್ಟು ರೋಡ್ ಶೋ ಮಾಡುತ್ತಿದ್ದಾರೆ. ರೋಡ್ ಶೋನಿಂದ ದುಡಿಯುವ ಜನ ಬೀದಿ ಪಾಲಾಗುತ್ತಿದ್ದಾರೆ. ಯಾವ ಪುರುಷಾರ್ಥಕ್ಕೆ ರೋಡ್ ಶೋ ಮಾಡ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು. ನಾಳೆ ನೀಟ್ ಪರೀಕ್ಷೆ ಬರೆಯುವ ಮಕ್ಕಳ ಮೇಲೆ ರೋಡ್ ಶೋ ಪರಿಣಾಮ ಬೀರುತ್ತದೆ. ಮನೆ ಬಾಗಿಲು ತೆಗೆಯಬೇಡಿ, ಓಣಿಯಲ್ಲಿ ಓಡಾಡಬೇಡಿ ಅಂತಾರೆ, ಹಾಗದರೆ ರೋಡ್ ಶೋ ಯಾಕೆ ಮಾಡ್ತೀರಾ? ಇದರಿಂದ ಜನರಿಗೆ ತೊಂದರೆಯೇ ಹೊರತು ಬಿಜೆಪಿಗೆ ಲಾಭ ಇಲ್ಲ ಎಂದು ಕಿಡಿಕಾರಿದರು.