Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಆಡಳಿತದಿಂದ ಜನರು ಬೇಸತ್ತಿದ್ದಾರೆ

ಕಾಂಗ್ರೆಸ್ ಆಡಳಿತದಿಂದ ಜನರು ಬೇಸತ್ತಿದ್ದಾರೆ
bangalore , ಶನಿವಾರ, 18 ನವೆಂಬರ್ 2023 (14:47 IST)
ಜನರ ಸಹಕಾರದಿಂದ ಪಕ್ಷ ಮುನ್ನಡೆಸುತ್ತೇವೆ ಅಂತಾ ನೂತನ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಅಡಿದ ಅವರು, ಕಾಂಗ್ರೆಸ್ ಆಡಳಿತದಿಂದ ಜನರು ಬೇಸತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜನ ಸಿಡಿದೆದ್ದಾರೆ ಅಂತಾ ಕಾಂಗ್ರೆಸ್​​​ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಮಾಜಿ ಉಪಮುಖ್ಯಮಂತ್ರಿ ಆರ್ ಅಶೋಕ ಅವರನ್ನು ಬಿಜೆಪಿ ಆಯ್ಕೆ ಮಾಡಿದೆ. ಅಶೋಕ ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿದ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು. ಅಶೋಕ ಅವರು ಪಕ್ಷದ ಪ್ರಮುಖ ಒಕ್ಕಲಿಗ ಮುಖವಾಗಿದ್ದು, ಇದು ಕರ್ನಾಟಕದ ಪ್ರಬಲ ಸಮುದಾಯಗಳಲ್ಲಿ ಒಂದಾಗಿದೆ.

ವಿಶೇಷವಾಗಿ ಕರ್ನಾಟಕದ ದಕ್ಷಿಣ ಭಾಗಗಳಾದ ಬೆಂಗಳೂರು, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ತುಮಕೂರು ಮತ್ತು ಚಿಕ್ಕಮಗಳೂರುಗಳಲ್ಲಿ ಈ ಸಮುದಾಯದವರು ಹೆಚ್ಚಿಗಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪಕ್ಷದ ಹೀನಾಯ ಸೋಲು ಕಂಡಿರುವುದರಿಂದ ಬೂತ್ ಮಟ್ಟದಿಂದ ಪಕ್ಷವನ್ನು ಕಟ್ಟಬೇಕಿದೆ. ಅಸಮಾಧಾನಗೊಂಡಿರುವ ಹಿರಿಯ ಶಾಸಕರ ಮನವೊಲಿಸಬೇಕಿದೆ. ಲೋಕಸಭೆ ಚುನಾವಣೆ ಬಿಜೆಪಿಗೆ ದೊಡ್ಡ ಸವಾಲಾಗಿದ್ದು ಕಳೆದ ಬಾರಿ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಅಷ್ಟೇ ಸ್ಥಾನಗಳನ್ನು ಉಳಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿವಾಹವಾಗಲು ನಿರಾಕರಿಸಿದ ಯುವತಿಗೆ ಯುವಕ ಮಾಡಿದ್ದೇನು ಗೊತ್ತಾ?