Select Your Language

Notifications

webdunia
webdunia
webdunia
webdunia

ಜನರ ಆಶೋತ್ತರ ಈಡೇರಿಸಿ: ಕೆ.ಎಸ್. ಈಶ್ವರಪ್ಪ

ಜನರ ಆಶೋತ್ತರ ಈಡೇರಿಸಿ: ಕೆ.ಎಸ್. ಈಶ್ವರಪ್ಪ
ಬೆಂಗಳೂರು , ಸೋಮವಾರ, 30 ಆಗಸ್ಟ್ 2021 (09:06 IST)
ಸೊರಬ: ಗ್ರಾಮಗಳ ಅಭಿವೃದ್ಧಿಗೆ ಚುನಾಯಿತ ಪ್ರತಿನಿಧಿಗಳು ಒಟ್ಟಾಗಿ ಕೆಲಸ ಮಾಡುವ ಮೂಲಕ ಜನರ ಆಶೋತ್ತರ ಈಡೇರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಕೆ.ಎಸ್. ಈಶ್ವರಪ್ಪ ಸಲಹೆ ನೀಡಿದರು.

ಪಟ್ಟಣದ ರಂಗಮಂದಿರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಮೈಸೂರು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಯೋಜನೆಗಳನ್ನು ತಿಳಿದುಕೊಳ್ಳಬೇಕು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜೊತೆ ಚರ್ಚಿಸಿ ಪ್ರತಿ ಮನೆಗೆ ಭೇಟಿ ನೀಡಿ ಯಾವ ಕೆಲಸಗಳು ಆಗಬೇಕು ಎಂಬುವುದರ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಸದಸ್ಯರು ತಮ್ಮ ಗ್ರಾಮದ ಕೆರೆಗಳ ಅಭಿವೃದ್ಧಿ, ಸ್ವಚ್ಛತೆ, ಕುಡಿಯುವ ನೀರು, ಜಲಸಂರಕ್ಷಣೆ ಅನೇಕ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕೈಗೊಳ್ಳಬಹುದು ಎಂದು ತಿಳಿಸಿದರು.
ಅಧಿಕಾರಿಗಳು ಗ್ರಾಮ ಸಭೆಗೆ ಕಡ್ಡಾಯವಾಗಿ ಹಾಜರಾಗಿ ಅಲ್ಲಿಯ ಆಗಬೇಕಾದ ಕೆಲಸಗಳನ್ನು ಪಟ್ಟಿ ಮಾಡಿ ಅವುಗಳ ಬಗ್ಗೆ ಒತ್ತು ನೀಡಬೇಕು. ಗ್ರಾಮ ಸಭೆಗೆ ಅಧಿಕಾರಿಗಳು ಗೈರಾದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈಚೆಗೆ ತಾಲ್ಲೂಕಿನ ಕುಪ್ಪಗಡ್ಡೆ ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಸಭೆಗೆ ಗೈರಾಗಿರುವುದನ್ನು ಖಂಡಿಸಿ ಗ್ರಾಮಸಭೆ ರದ್ದುಪಡಿಸಿರುವುದು ಮೆಚ್ಚುವಂತಹದ್ದು ಎಂದರು.
ಗ್ರಾಮ ಪಂಚಾಯಿತಿ ಸುಸ್ಥಿರ ಅಭಿವೃದ್ಧಿ, ನೈಸರ್ಗಿಕ ಸಂಪನ್ಮೂಲಗಳ ಬಳಕೆ, ಆರೋಗ್ಯ, ಶಿಕ್ಷಣ, ಆಡಳಿತ, ಸಭೆಗಳ ಮಹತ್ವ, ಗ್ರಾಮೀಣ ಬಡತನ ನಿರ್ವಹಣೆ, ಸಂಪನ್ಮೂಲಗಳ ಸಂಗ್ರಹಣೆಯ ಮಹತ್ವ ಸೇರಿ ಹಲವು ವಿಷಯಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.
ಜಿಲ್ಲಾ ಪಂಚಾಯಿತಿ ಸಿಇಒ ಎಂ. ಎಲ್. ವೈಶಾಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಕುಮಾರ ಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ, ವಿಧಾನಪರಿಷತ್ ಸದಸ್ಯ, ಆರ್. ಪ್ರಸನ್ನ ಕುಮಾರ್, ಸಂಪನ್ಮೂಲ ವ್ಯಕ್ತಿಗಳಾದ ಶಿವಾನಂದ ಕಳವೆ, ಪ್ರಮೋದ ಹೆಗಡೆ, ಸ್ವಪ್ನಾ, ಮಲ್ಲಿಕಾರ್ಜುನ ಸ್ವಾಮಿ, ಪ್ರಕಾಶ, ಮನು, ಮಂಜುನಾಥ, ಇಒ ಕುಮಾರ್ ಇದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ಧರ್ಮವನ್ನು ಪುನರುದ್ಧಾರ ಮಾಡಲು ಅವತಾರ ತಾಳಿದ ಶ್ರೀ ಕೃಷ್ಣನ ಕಥೆಯಿದು..!