Select Your Language

Notifications

webdunia
webdunia
webdunia
webdunia

ಕೇಂದ್ರ ಸ್ಥಾನ ಮಾಡದ್ದಕ್ಕೆ ಮುನಿಸು: ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ಕೇಂದ್ರ ಸ್ಥಾನ ಮಾಡದ್ದಕ್ಕೆ ಮುನಿಸು: ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು
ಗದಗ , ಶುಕ್ರವಾರ, 29 ಮೇ 2015 (11:37 IST)
ನಮ್ಮ ಗ್ರಾಮಗಳನ್ನು ಗ್ರಾಮ ಪಂಚಾಯತ್ ಕೇಂದ್ರ ಸ್ಥಾನಗಳನ್ನಾಗಿ ಮಾಡಲಿಲ್ಲ ಎಂಬ ಕಾರಣಕ್ಕೆ ಮುನಿಸಿಕೊಂಡಿರುವ ಎಜಿಲ್ಲೆಯ ರೋಣ ತಾಲೂಕಿನ ಎರಡು ಗ್ರಾಮಗಳ ಗ್ರಾಮಸ್ಥರು ಮತ ಚಲಾಯಿಸದೆ ಮತದಾನವನ್ನು ಬಹಿಷ್ಕರಿಸಿದ್ದಾರೆ. 
 
ತಾಲೂಕಿನ ಜಗಳೂರು, ಚಿಕ್ಕವಡ್ಡಟ್ಟಿ ಎಂಬ ಎರಡು ಗ್ರಾಮಗಳ ಗ್ರಾಮಸ್ಥರು ಮತದಾನವನ್ನು ಬಹಿಷ್ಕರಿಸಿದ್ದು, ಈ ಗ್ರಾಮಗಳಲ್ಲಿ 13 ಗ್ರಾಮ ಪಂಚಾಯತ್ ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಆದರೆ ಮತದಾರರು ಮತದಾನವನ್ನೇ ಬಹಿಷ್ಕರಿಸಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಖಾಲಿ ಕುಳಿತುಕೊಳ್ಳುವಂತಾಗಿದೆ.  
 
ಕಾರಣವೇನು?
ನಮ್ಮ ಗ್ರಾಮವನ್ನು ಕೇಂದ್ರ ಸ್ಥಾನವನ್ನಾಗಿ ಮಾಡದೇ ಮತ್ತೊಂದು ಗ್ರಾಮವನ್ನು ಪಂಚಾಯತ್ ಕೇಂದ್ರ ಸ್ಥಾನವನ್ನಾಗಿ ಮಾಡಲಾಗಿದೆ ಎಂಬುದು ಗ್ರಾಮಸ್ಥರ ಬೇಸರಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಮತದಾನವನ್ನು ಬಹಿಷ್ಕರಿಸಿದ್ದಾರೆ. 
 
ಇನ್ನು ಈ ಸಂಬಂಧ ತಹಶೀಲ್ದಾರ್ ಅವರಿಗೆ ಸಂಬಂಧಪಟ್ಟ ಅಧಿಕಾರಿಗಳು ಈಗಾಗಲೇ ಮಾಹಿತಿ ಮುಟ್ಟಿಸಿದ್ದಾರೆ ಎನ್ನಲಾಗಿದ್ದು, ಸ್ಥಳಕ್ಕಾಗಮಿಸಿ ಮತದಾನ ಮಾಡುವಂತೆ ಮನವೊಲಿಸಲಿದ್ದಾರೆ ಎಂದು ತಿಳಿದು ಬಂದಿದೆ. 

Share this Story:

Follow Webdunia kannada