ಕೈ ಅತೃಪ್ತ ಶಾಸಕ ಜಾಧವ್ ಕ್ಷೇತ್ರದಲ್ಲಿ ಜನರ ಆಕ್ರೋಶ

ಸೋಮವಾರ, 11 ಫೆಬ್ರವರಿ 2019 (18:09 IST)
ಕಾಂಗ್ರೆಸ್ ಅತೃಪ್ತರಲ್ಲಿ ಗುರುತಿಸಿಕೊಂಡಿರುವ ಶಾಸಕ ಉಮೇಶ್ ಜಾಧವ ಕ್ಷೇತ್ರದಲ್ಲಿ ಜನರು ಪ್ರತಿಭಟನೆ ನಡೆಸಿದ್ದಾರೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ಮತಕ್ಷೇತ್ರದ ಶಾಸಕ ಉಮೇಶ ಜಾಧವ್ ಕ್ಷೇತ್ರದಲ್ಲಿ ಪ್ರತಿಭಟನೆ ನಡೆದಿದೆ. ನೀರಿಗಾಗಿ ಗ್ರಾಮಸ್ಥರು ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಕಲಬುರ್ಗಿಯ ಚಿಂಚೋಳಿ ತಾಲೂಕಿನ ಕುಡಳ್ಳಿ ಗ್ರಾಮಸ್ಥರಿಂದ ಇಂದು ಪ್ರತಿಭಟನೆ ನಡೆದಿದೆ. ರಸ್ತೆ ಮೇಲೆ ಕೊಡಗಳನ್ನು ಇಟ್ಟು ಪ್ರತಿಭಟನೆ ಮಾಡಿದ ಗ್ರಾಮಸ್ಥರು, ನೀರು ಪೂರೈಕೆಗೆ ಒತ್ತಾಯ ಮಾಡಿದರು.

ಅಧಿಕಾರಿಗಳು, ಜನಪ್ರತಿನಿಧಿಗಳು ಯಾರು ನಮ್ಮ ಸಮಸ್ಯೆಗಳನ್ನು ಕೇಳುತ್ತಿಲ್ಲ. ನೀರಿನ ಸಮಸ್ಯೆ ಬಗೆ ಹರಿಸಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದರು.


ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ 50ಕ್ಕೂ ಹೆಚ್ಚು ಹೋರಾಟರಾರರ ಬಂಧನ ಮಾಡಿದ್ಯಾಕೆ?