Publish Date: Thu, 09 Jul 2026 (16:13 IST)
Updated Date: Thu, 09 Jul 2026 (16:16 IST)
ಬೆಳಗಾವಿ: ಜನರು ಸರ್ಕಾರ ಹುಡುಕಬಾರದು, ಜನರ ಬಳಿಯೇ ಸರ್ಕಾರ ಹೋಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು ಸೇರಿ ಎಲ್ಲ ಇಲಾಖೆ ಅಧಕಾರಿಗಳು ಕೆಲಸ ಆಡಬೇಕೆಂದು ಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದರು.
ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಗುರುವಾರ ನಡೆದ ಬೆಳಗಾವಿ ವಿಭಾಗಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲ ಇಲಾಖೆಗಳ ಜಿಲ್ಲಾ ಮತ್ತು ತಾಲ್ಲೂಕು ಹಂತದ ಪ್ರತಿ ಅಧಿಕಾರಿ ಕೇಂದ್ರಸ್ಥಾನದಲ್ಲಿ ಇರುವ ಬಗ್ಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳು ಖಚಿತಪಡಿಸಿಕೊಳ್ಳಬೇಕು. ಅವರ ಚಲನ-ವಲನದ ಮೇಲೆ ನಿರಂತರ ನಿಗಾ ವಹಿಸಬೇಕೆಂದು ಹೇಳಿದರು.
ಸರ್ಕಾರವನ್ನು ಜನರು ಹುಡುಕಬಾರದು. ಜನರ ಬಳಿಯೇ ಸರ್ಕಾರ ಹೋಗಬೇಕು ಎಂಬುದಕ್ಕೆ ನಮ್ಮ ಮೊದಲ ಆದ್ಯತೆ' ಎಂದರು.
'ಜನರನ್ನು ಕಚೇರಿಗೆ ಅಲೆದಾಡಿಸುವುದು ನಿಲ್ಲಬೇಕು. ಅಧಿಕಾರಿಗಳು ಘನತೆಯಿಂದ ಇರಬೇಕು' ಎಂದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ