Publish Date: Thu, 29 Sep 2022 (14:58 IST)
Updated Date: Thu, 29 Sep 2022 (14:00 IST)
ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆ ಫ್ಲೆಕ್ಸ್ ಹರಿದು ಹಾಕಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿಎಂ ಹಾಗೂ ಅವರ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದರು. ಈ ವಿಚಾರವಾಗಿ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಫ್ಲೆಕ್ಸ್ ಹಾಕೋರು ಅನುಮತಿ ಪಡೆದು ಹಾಕಬೇಕು' ಯಾವುದೇ ರಾಜಕೀಯ ಪಕ್ಷದ ಫ್ಲೆಕ್ಸ್ ಹರಿಯೋ ಅವಶ್ಯಕತೆ ಇಲ್ಲ ಎಂದು ಡಿಕೆಶಿ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.
ಭಾರತ್ ಜೋಡೋ ಯಾತ್ರೆ ಫ್ಲೆಕ್ಸ್ ಹರಿದು ಹಾಕಿದ ವಿಚಾರಕ್ಕೆ ಡಿಕೆ ಶಿವಕುಮಾರ್ ಅವರು, 'ನಾನು ಮನಸ್ಸು ಮಾಡಿದ್ರೆ ಅವರು ಎಲ್ಲೂ ಕಾರ್ಯಕ್ರಮ ಪ್ಲೇಕ್ಸ್ ಹಾಕೋದಕ್ಕೆ ಆಗಲ್ಲ ಎಂದು ಸಿಎಂ ಮತ್ತು ಅವರ ಕಾರ್ಯಕರ್ತರಿಗೆ ಡಿಕೆಶಿ ಎಚ್ಚರಿಕೆ ನೀಡಿದ್ದರು.