Select Your Language

Notifications

webdunia
webdunia
webdunia
webdunia

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿ

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿ
ಮಂಗಳೂರು , ಗುರುವಾರ, 28 ನವೆಂಬರ್ 2019 (10:34 IST)
ಮಂಗಳೂರು : ಎರಡು ತಿಂಗಳ ಬಳಿಕ ಇದೀಗ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ.



ಚಾರ್ಮಾಡಿ ಘಾಟ್ ನಲ್ಲಿ ಎರಡು ತಿಂಗಳ ಹಿಂದೆ ಸುರಿದ ಭಾರೀ ಮಳೆಗೆ ರಸ್ತೆಗಳು ಹಾಳಾಗಿದ್ದವು.  ಈ ಹಿನ್ನಲೆಯಲ್ಲಿ ರಸ್ತೆ ಸಂಚಾರ ಸ್ಥಗಿತಗೊಳಿಸಿದ್ದರು. ಇದೀಗ 24 ಗಂಟೆಯೂ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚರಿಸಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂದೂ ರೂಪೇಶ್ ಆದೇಶಿಸಿದ್ದಾರೆ.


ಕಾರುಗಳು, ಜೀಪು, ಟೆಂಪೋ, ವ್ಯಾನ್, ಮಿನಿ ವ್ಯಾನ್ , ಅಂಬುಲೆನ್ಸ್, ದ್ವಿಚಕ್ರ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ. ಹಾಗೇ ಫೋಟೋಗ್ರಾಫಿ, ಸೆಲ್ಫಿ ತೆಗೆಯುವುದಕ್ಕೆ ನಿಷೇಧ ಹೇರಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ವಿದೇಶ ಪ್ರವಾಸದಲ್ಲಿ ಹೋಟೆಲ್ ನಲ್ಲಿ ಉಳಿದುಕೊಳ್ಳಲ್ವಂತೆ ಪ್ರಧಾನಿ ಮೋದಿ! ಕಾರಣವೇನು ಗೊತ್ತಾ?