ಕರ್ನಾಟಕದಲ್ಲಿ ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ಹೋಗುವ ವಿಚಾರದಲ್ಲಿ ಈ ಹಿಂದೆ ಸಾಕಷ್ಟು ಗಲಾಟೆಗಳು ನಡೆದಿವೆ. ಆದರೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆಇಎ ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿಯನ್ನು ನೀಡಿದೆ. ಇದೇ ತಿಂಗಳು ಅಕ್ಟೋಬರ್ 28 ಮತ್ತು ಅಕ್ಟೋಬರ್ 29 ರಂದು ವಿವಿಧ ನಿಗಮ ಮಂಡಳಿಗಳ ಹುದ್ದೆಗಳ ಭರ್ತಿಗೆ ಪರೀಕ್ಷೆಗಳು ನಡೆಯಲಿವೆ. ಈ ಪರೀಕ್ಷೆಗಳಿಗೆ ಹಿಜಾಬ್ ಧರಿಸಿ ಅಭ್ಯರ್ಥಿಗಳು ಹಾಜರಾಗಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ. ರಾಜ್ಯದಲ್ಲಿ ಹಿಜಾಬ್ ವಿಚಾರ ಭಾರೀ ಸಂಘರ್ಷಕ್ಕೆ ಕಾರಣವಾಗಿತ್ತು.ಇದೀಗ ಕೆಇಎ ವಿವಿಧ ಮಂಡಳಿಗಳ ಹುದ್ದೆ ಪರೀಕ್ಷೆಗೆ ಹಿಜಾಬ್ ಧರಿಸಲು ಅವಕಾಶ ನೀಡಿದೆ. ಪರೀಕ್ಷೆಗೆ ಅಭ್ಯರ್ಥಿಗಳು ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಿರಬೇಕು. ಅವರನ್ನು ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಲಿದ್ದಾರೆ ಎಂದು ಕೆಇಎ ತಿಳಿಸಿದೆ.