Select Your Language

Notifications

webdunia
webdunia
webdunia
webdunia

ಪೇಶ್ವೆ ಡಿಎನ್ ಎ ವ್ಯಕ್ತಿ ಬಗ್ಗೆ ಹೇಳಿದ್ದೇನೆಯೆ ಹೊರತು ಬ್ರಾಹ್ಮಣರನ್ನು ನಿಂದಿಸಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Peshwa said about DNA person but did not insult Brahmins
bangalore , ಸೋಮವಾರ, 6 ಫೆಬ್ರವರಿ 2023 (18:35 IST)
ಮರಾಠಿ ಪೇಶ್ವೆಗಳ ಡಿ.ಎನ್ ಎ ಇರುವ ವ್ಯಕ್ತಿಯನ್ನು ಕರ್ನಾಟಕಕ್ಕೆ ಮುಖ್ಯಮಂತ್ರಿ ಮಾಡಲು ಬಿಜೆಪಿ ಮತ್ತು ಆರ್ ಎಸ್ ಎಸ್ ಹೊರಟಿವೆ ಎಂದು ಹೇಳಿದ್ದೇನೆಯೇ ಹೊರತು, ರಾಜ್ಯದ ಬ್ರಾಹ್ಮಣ ಸಮುದಾಯವನ್ನು ನಾನೆಲ್ಲೂ ನಿಂದಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪುನರುಚ್ಚರಿಸಿದರು.
 
ಯಶವಂತಪುರ ವಿಧಾನಸಭೆ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನನ್ನ ಹೇಳಿಕೆಯನ್ನು ತಿರುಚುವ ಪ್ರಯತ್ನವನ್ನು ವ್ಯವಸ್ಥಿತವಾಗಿ ನಡೆಸಲಾಗುತ್ತಿದೆಯೇ ಹೊರತು ನಾನು ಎತ್ತಿದ  ವಿಷಯದ ಬಗ್ಗೆ ಚರ್ಚೆ ಮಾಡುತ್ತಿಲ್ಲ ಎಂದರು. 
 
ಪೇಶ್ವೆಗಳ ಡಿಎನ್ ಎ ಇರುವ ವ್ಯಕ್ತಿಯನ್ನು ಸಿಎಂ ಮಾಡಲು ಬಿಜೆಪಿಯವರು ಹುನ್ನಾರ ಮಾಡಿದ್ದಾರೆ ಅಂತ ಹೇಳಿದ್ದೇನೆ. 
ಇದಕ್ಕೆ ಯಾಕೆ ಗಾಬರಿ ಯಾಕೆ? ಬ್ರಾಹ್ಮಣ ಸಮುದಾಯವೂ ಸೇರಿ ನಾನು ಯಾವುದೇ ಸಮಾಜಕ್ಕೆ ಅಗೌರವ ತೋರಿಲ್ಲ. ತೋರುವುದೂ ಇಲ್ಲ ಎಂದು ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
 
ನಾನು ಸಮಾಜದ ಬಗ್ಗೆ ಅಗೌರವ ತೋರಿದ್ದೇನೆ ಕೆಲವರು ನನ್ನ ಹೇಳಿಕೆಯನ್ನು ತಿರುಚಿ ಮಾತನಾಡುತ್ತಿದ್ದಾರೆ. ದೇಶದ ಇತಿಹಾಸದಲ್ಲಿ ನಡೆದ ಬೆಳವಣಿಗೆ ಬಗ್ಗೆ ಹೇಳಿದ್ದೇನೆ. ನಿನ್ನೆ ನಾನು ಕೊಟ್ಟ ಹೇಳಿಕೆ ಬ್ರಾಹ್ಮಣ ಸಮಾಜದ ಅವಹೇಳನ ಅಲ್ಲ. ಕರ್ನಾಟಕದಲ್ಲಿ‌ ಇರುವ ಬ್ರಾಹ್ಮಣ ಸಮಾಜ ಸುಸಂಸ್ಕೃತ ಸಮಾಜ. ಆ ಬ್ರಾಹ್ಮಣ ಸಮಾಜದ ಬಗ್ಗೆ ನನಗೆ ಗೌರವ ಇದೆ. ನಮ್ಮ ಕುಟುಂಬ ಬ್ರಾಹ್ಮಣ ಸಮಾಜ ಮತ್ತು ಶೃಂಗೇರಿ ಮಠದ ಬಗ್ಗೆ ಗೌರವ ಇಟ್ಟುಕೊಂಡು ನಡೆದುಕೊಂಡು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಕ್ಕೆ‌ ಮತ್ತೊಮ್ಮೆ ಪ್ರಧಾನಿ ಮೋದಿ ಆಗಮನ,ಶಕ್ತಿ ಸಪ್ತಾಹಕ್ಕೆ ಚಾಲನೆ ..!