Select Your Language

Notifications

webdunia
webdunia
webdunia
webdunia

ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ: ಪ್ರಮುಖ ನಗರಗಳಲ್ಲಿ ಇಂಧನ ದರದ ವಿವರ ಹೀಗಿದೆ

ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ: ಪ್ರಮುಖ ನಗರಗಳಲ್ಲಿ ಇಂಧನ ದರದ ವಿವರ ಹೀಗಿದೆ
bangalore , ಗುರುವಾರ, 24 ಮಾರ್ಚ್ 2022 (20:01 IST)
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಮಂಗಳವಾರ (ಮಾರ್ಚ್ 22) ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ. ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್‌ಗೆ 78 ಪೈಸೆ ಹೆಚ್ಚಿಸಲಾಗಿದೆ. ಅದಾದ ನಂತರ ನಿನ್ನೆ ಬುಧವಾರ (ಮಾರ್ಚ್ 23) ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ 84 ಪೈಸೆ ಏರಿಕೆಯಾಗಿದೆ. ಸತತ ಎರಡನೇ ದಿನವೂ 80 ಪೈಸೆ ಆಗಿದ್ದು ವಾಹನ ಸವಾರರಿಗೆ, ಪೆಟ್ರೋಲ್ ಡೀಸೆಲ್ ಬೆಲೆ ಮತ್ತೆ ಬಿಸಿ ಮುಟ್ಟಿತ್ತು. ಆದರೆ ಇಂದು ಪೆಟ್ರೋಲ್-ಡೀಸೆಲ್ ಬೆಲೆಗಳಲ್ಲಿ ಸ್ಥಿರತೆ ಇದೆ.
 
ಪ್ರಸ್ತುತ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 97.01 ರೂಪಾಯಿ, ಡೀಸೆಲ್ ಲೀಟರ್‌ಗೆ 88.27 ರೂಪಾಯಿ, ಚನ್‌ನಲ್ಲಿ ಪೆಟ್ರೋಲ್ ಲೀಟರ್‌ಗೆ 102.91 ರೂಪಾಯಿ, ಡೀಸೆಲ್ ಲೀಟರ್‌ಗೆ 92.95 ರೂಪಾಯಿ, ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 111.67 ರೂಪಾಯಿ ಲೀಟರ್ ಡೀಸೆಲ್ ಬೆಲೆ 95.85 ರೂಪಾಯಿ, ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ಬೆಲೆ ಬೆಲೆ 106.34 ರೂಪಾಯಿ ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 91.42 ರೂಪಾಯಿ ಆಗಿದೆ. ಮತ್ತೆ ಬೆಲೆ ಏರಿಕೆ ಮೂಲಕ ದರ ಬದಲಾವಣೆ ಆಗಲಿರುವ ಸೂಚನೆ ಲಭ್ಯವಾಗಿದೆ. ಈ ಮೊದಲು, ಮಾರ್ಚ್ 10 ರಿಂದ ಬೆಲೆ ಏರಿಕೆ ಆಗುವ ನಿರೀಕ್ಷೆ ಇತ್ತು. ಅಂತಾರಾಷ್ಟ್ರೀಯ ತೈಲ ಕಚ್ಚಾತೈಲ ಬೆಲೆ ಏರಿಕೆ ಈಗ ಭಾರತದಲ್ಲೂ ಬೆಲೆ ಏರಿಕೆಯಾಗಿದೆ.ಸೋಮವಾರ (ಮಾರ್ಚ್ 21) ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಖರೀದಿ ಮಾಡುವವರಿಗೆ ಜಾಗತಿಕ ತೈಲ ದರ ಏರಿಕೆಯಾಗಿದೆ. ಭಾರತದಲ್ಲಿ ಡೀಸೆಲ್ ಸಗಟು ಖರೀದಿ ದರ ಲೀಟರ್‌ಗೆ 25 ರೂಪಾಯಿ ಹೆಚ್ಚಿಸಲಾಗಿದೆ. ಅಂತಾರಾಷ್ಟ್ರೀಯ ತೈಲ ದರವು ಶೇಕಡಾ 40ರಷ್ಟು ಆಗಿತ್ತು. ಬಲ್ಕ್ ಆಗಿ, ದೊಡ್ಡ ಪ್ರಮಾಣದಲ್ಲಿ ಡೀಸೆಲ್ ಖರೀದಿ ಮಾಡುವವರಿಗೆ ಇದು ಅನ್ವಯವಾಗಿತ್ತು.
 
ಬೆಂಗಳೂರಿನಲ್ಲಿ ಪ್ರಸ್ತುತ ಲೀಟರ್ ಪೆಟ್ರೋಲ್ ದರ 102.26 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.58 ರೂಪಾಯಿ ದಾಖಲಾಗಿದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 111.67 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.85 ರೂಪಾಯಿ ಇದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 102.91 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.95 ರೂಪಾಯಿ ಇದೆ.
 
ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 109.10 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.50 ರೂಪಾಯಿ ನಿಗದಿಯಾಗಿದೆ. ಗುಜರಾತ್​ನ ಗಾಂಧಿನಗರದಲ್ಲಿ ಲೀಟರ್ ಪೆಟ್ರೋಲ್ ದರ 96.06 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 90.09 ರೂಪಾಯಿ ನಿಗದಿಯಾಗಿದೆ. ಕೇರಳದ ತಿರುವನಂತಪುರಂನಲ್ಲಿ ಲೀಟರ್ ಪೆಟ್ರೋಲ್ಗೆ 107.12 ರೂಪಾಯಿ ಇದ್ದು, ಲೀಟರ್ ಡೀಸೆಲ್ ಬೆಲೆ 94.22 ರೂಪಾಯಿ ನಿಗದಿಯಾಗಿದೆ. ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 96.88 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 88.41 ರೂಪಾಯಿ ನಿಗದಿಯಾಗಿದೆ.
 
ಶ್ರೀಗಂಗಾನಗರದಲ್ಲಿ ಲೀಟರ್ ಪೆಟ್ರೋಲ್​ಗೆ 112.46 ರೂಪಾಯಿ ಹಾಗೂ ಲೀಟರ್ ಡೀಸೆಲ್ಗೆ 95.62 ರೂಪಾಯಿ ದಾಖಲಾಗಿದೆ. ಭೋಪಾಲ್ನಲ್ಲಿ ಲೀಟರ್ ಪೆಟ್ರೋಲ್ ದರ 108.98 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.52 ರೂಪಾಯಿ ಇದೆ. ಗುವಾಹಟಿಯಲ್ಲಿ ಲೀಟರ್ ಪೆಟ್ರೋಲ್ ದರ 95.51 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 82.02 ರೂಪಾಯಿ ನಿಗದಿಯಾಗಿದೆ.
 
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
 
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ವಸ್ತುಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿ), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಭಾರತ ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ವಿದೇಶಗಳು ಮತ್ತು ವಿದೇಶಿ ವಿನಿಮಯ ದರಗಳು ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳೊಂದಿಗೆ ಅಂತರರಾಷ್ಟ್ರೀಯ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರ್ನಾಟಕ, ಕೇರಳ, ತಮಿಳುನಾಡು ಸೇರಿ ಹಲವೆಡೆ ಗುಡುಗು ಸಹಿತ ಮಳೆ: ಹವಾಮಾನ ಹೀಗಿದೆ