Select Your Language

Notifications

webdunia
webdunia
webdunia
webdunia

ಸತತ 2ನೇ ದಿನ ಸ್ಥಿರತೆ ಕಾಯ್ದುಕೊಂಡಿದೆ ಪೆಟ್ರೋಲ್, ಡೀಸೆಲ್ ಬೆಲೆ

Petrol and Diesel prices remain stable for the 2nd consecutive day
bangalore , ಮಂಗಳವಾರ, 19 ಅಕ್ಟೋಬರ್ 2021 (21:32 IST)
ಇಂದು ಪ್ರಮುಖ ನಗರಗಳಲ್ಲಿ ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಏರಿದೆಯೋ, ಇಲ್ಲವೋ? ಎಂಬ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.
 
ದೆಹಲಿ:-ಸರ್ಕಾರಿ ತೈಲ ಕಂಪನಿಗಳು ಮಂಗಳವಾರದ ಅ.19 ಪೆಟ್ರೋಲ್ ಡೀಸೆಲ್ ಬೆಲೆಯನ್ನು ಬಿಡುಗಡೆ ಮಾಡಿವೆ.ಹಲವು ದಿನಗಳಿಂದ ನಿರಂತರ ಏರಿಕೆ ಕಾಣುತ್ತಿದ್ದ ಇಂಧನ ದರ ಇಂದು ಸ್ಥಿರವಾಗಿದೆ. ನಿನ್ನ ಸಹ ಇಂಧನ ದರ ಸ್ಥಿರವಾಗಿತ್ತು. ಆ ಬಳಿಕ ಸತತ 2ನೇ ದಿನ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ.ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 105.84 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 94.57 ರೂಪಾಯಿ ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಲೀಟರ್ ಪೆಟ್ರೋಲ್ 111.77 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 102.52 ರೂಪಾಯಿ ಇದೆ.ಇನ್ನು ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 109.53 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.37 ರೂಪಾಯಿ ಇದೆ. ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 110.09 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 103.08 ರೂಪಾಯಿ ಇದೆ.ಅದೇ ರೀತಿ ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 106.43 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.68 ರೂಪಾಯಿ ಇದೆ. ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 103.01 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 98.92 ರೂಪಾಯಿ ಇದೆ. ಇತ್ತೀಚಿನ ಏರಿಕೆಯಿಂದ ಕೇವಲ ಲೀಟರ್ ಪೆಟ್ರೋಲ್ ಬೆಲೆಯೊಂದೇ ಅಲ್ಲ ಕೆಲವೆಡೆ ಲೀಟರ್ ಡೀಸೆಲ್ ದರವೂ ಸಹ 100ರ ಗಡಿ ದಾಟಿದೆ.
 
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
 
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.
ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Share this Story:

Follow Webdunia kannada

ಮುಂದಿನ ಸುದ್ದಿ

ಧಾರಾಕಾರ ಮಳೆಗೆ ದೇವರನಾಡು ತತ್ತರ: ಸಾವಿನ ಸಂಖ್ಯೆ 35ಕ್ಕೇರಿಕೆ