Select Your Language

Notifications

webdunia
webdunia
webdunia
Saturday, 12 April 2025
webdunia

10 ದಿನಗಳಲ್ಲಿ 9ನೇ ಬಾರಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ

Petrol diesel prices up for the 9th time in 10 days
bangalore , ಗುರುವಾರ, 31 ಮಾರ್ಚ್ 2022 (19:02 IST)
ಭಾರತದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗುತ್ತಿದೆ. ಮಾರ್ಚ್ 22ರಂದು ಆರಂಭವಾದ ಬೆಲೆ ಏರಿಕೆ ಓಟ ಇಂದು (ಮಾರ್ಚ್ 30, ಮಂಗಳವಾರ) ಮತ್ತೆ ಮುಂದುವರಿದಿದೆ. ಇಂದು ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ತಲಾ 80 ಪೈಸೆ ಹೆಚ್ಚಿಸಲಾಗಿದೆ. ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿದಿನ ಎನ್ನುವಂತೆ ಏರುತ್ತಲೇ ಇದೆ. ಕಳೆದ 9 ದಿನಗಳಲ್ಲಿ ಇಂಧನ ಬೆಲೆ ಪ್ರತಿ ಲೀಟರ್​ಗೆ ಸರಾಸರಿ ₹ 6.40 ಹೆಚ್ಚಾಗಿದೆ.
 
ದೆಹಲಿಯಲ್ಲಿಂದು ಲೀಟರ್ ಪೆಟ್ರೋಲ್ ಬೆಲೆ 80 ಪೈಸೆ ಏರಿಕೆಯಾಗಿದ್ದು, ಒಂದು ಲೀಟರ್​ಗೆ ₹ 101.81 ಮುಟ್ಟಿದೆ. ಲೀಟರ್ ಡೀಸೆಲ್ ಬೆಲೆಯೂ 80 ಪೈಸೆ ಏರಿಕೆಯಾಗಿದ್ದು, ಬೆಲೆ ₹ 93.07 ತಲುಪಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್​ ₹ 116.72, ಡೀಸೆಲ್ ₹ 100.94ಕ್ಕೆ ಮಾರಾಟವಾಗುತ್ತಿದೆ.ತೈಲ ಕಂಪನಿಗಳು ಪ್ರತಿದಿನ ಬೆಳಗ್ಗೆಯೇ ವಿವಿಧ ಪ್ರಮುಖ ನಗರಗಳ ಪೆಟ್ರೋಲ್​-ಡೀಸೆಲ್​ ಬೆಲೆಯನ್ನು ಬಿಡುಗಡೆ ಮಾಡುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲಕ್ಕೆ ಇರುವ ಬೆಲೆ ಆಧಾರದಲ್ಲಿ ಪೆಟ್ರೋಲ್​-ಡೀಸೆಲ್​ ಬೆಲೆ ನಿರ್ಧರಿಸಲಾಗುತ್ತದೆ. ಕಳೆದ ಮಾರ್ಚ್ 22ರಿಂದ ಪೆಟ್ರೋಲ್ ಡೀಸೆಲ್ ಧಾರಣೆ ಸತತ ಏರಿಕೆ ಕಾಣುತ್ತಿದೆ. ಇಂದು ಮತ್ತೆ ಬೆಲೆಗಳು ಏರಿಕೆ ಕಂಡಿದ್ದು, ಇದು 9ನೇ ದಿನದ ಬೆಲೆ ಏರಿಕೆಯಾಗಿದೆ.
 
ಸ್ಥಳೀಯ ಚಿಲ್ಲರೆ ಮಾರಾಟ ದರಕ್ಕೆ ಅನುಗುಣವಾಗಿ ಪ್ರತಿ ರಾಜ್ಯದಲ್ಲಿಯೂ ಪೆಟ್ರೋಲ್-ಡೀಸೆಲ್ ದರಗಳಲ್ಲಿ ವ್ಯತ್ಯಾಸ ಆಗುತ್ತದೆ. ಎಚ್‌ಪಿಸಿಎಲ್‌ ಜಾಲತಾಣದಲ್ಲಿ ಇರುವ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ₹107.28 ಮತ್ತು ಡೀಸೆಲ್ ದರ ₹91.25ಕ್ಕೆ ತಲುಪಿದೆ.
 
ಮೊದಲ ನಾಲ್ಕು ದಿನಗಳಲ್ಲಿ ಇಂಧನ ಬೆಲೆಗಳನ್ನು ದಿನಕ್ಕೆ ಪ್ರತಿ ಲೀಟರ್​ಗೆ ತಲಾ 80 ಪೈಸೆಯಂತೆ ಹೆಚ್ಚಿಸಲಾಗಿಯಿತು. ನಂತರದ ದಿನಗಳಲ್ಲಿ ಪೆಟ್ರೋಲ್ ಧಾರಣೆಯನ್ನು ಲೀಟರ್​ಗೆ 50 ಮತ್ತು 30 ಪೈಸೆಯಷ್ಟು ಹೆಚ್ಚಿಸಲಾಯಿತು. ನಿನ್ನೆ (ಮಾರ್ಚ್ 30) ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕ್ರಮವಾಗಿ 80 ಮತ್ತು 80 ಪೈಸೆಯಷ್ಟು ಹೆಚ್ಚಿಸಲಾಯಿತು. ಈವರೆಗಿನ ಸರಾಸರಿ ಲೆಕ್ಕಹಾಕಿದರೆ ಕಳೆದ 9 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ₹ 6.40ರಷ್ಟು ಹೆಚ್ಚಾಗಿದೆ.
 
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪರಿಷ್ಕರಣೆ
 
ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್), ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್​ಸಿಎಲ್) ಇಂಧನ ಬೆಲೆಗಳನ್ನು ಪ್ರತಿದಿನ ಅಂತರರಾಷ್ಟ್ರೀಯ ಮಾನದಂಡಗಳು ಮತ್ತು ವಿದೇಶಿ ವಿನಿಮಯ ದರಗಳೊಂದಿಗೆ ಪರಿಷ್ಕರಿಸುತ್ತವೆ. ಆ ಮೂಲಕ ವಿದೇಶಿ ವಿನಿಮಯ ದರಗಳ ಜತೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ಬೆಲೆಗಳು ಏನೆಂಬುದನ್ನು ಅವಲಂಬಿಸಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಬದಲಾಗುತ್ತವೆ.

Share this Story:

Follow Webdunia kannada

ಮುಂದಿನ ಸುದ್ದಿ

MLC ಸ್ಥಾನಕ್ಕೆ ಇಬ್ರಾಹಿಂ ರಾಜೀನಾಮೆ