Publish Date: Tue, 16 Jul 2019 (16:28 IST)
Updated Date: Tue, 16 Jul 2019 (16:30 IST)
ದೇವಾಲಯದಲ್ಲಿ ಕೆಲಸ ಮಾಡಿಕೊಂಡಿದ್ದವನ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆಗೈದಿರೋ ಘಟನೆ ನಡೆದಿದೆ.
ಗುಬ್ಬಿ ತಾಲೂಕಿನ ಚೇಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ಚೇಳೂರು ಹೋಬಳಿಯ ಹೂವಿನ ಕಟ್ಟೆ ರಂಗನಾಥಸ್ವಾಮಿ ದೇವಾಲಯದ ಹತ್ತಿರ ಮಧ್ಯರಾತ್ರಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಓಡಿಹೋಗಿದ್ದಾರೆ.
ಹತ್ಯೆಯಾದವನನ್ನು ರಂಗನಾಥಸ್ವಾಮಿ ದೇವಾಲಯದಲ್ಲಿ ಕೆಲಸ ಮಾಡುತ್ತಿದ್ದ ರಂಗನಾಥ (29) ಎಂದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ರಂಗನಾಥ ದೇವಾಲಯದಲ್ಲಿ ಕೆಲಸ ಮಾಡಿಕೊಂಡಿದ್ದನು.
ತಡರಾತ್ರಿ ರಂಗನಾಥನನ್ನು ಪುಸಲಾಯಿಸಿ ದೇವಸ್ಥಾನದ ಹೊರಗಡೆ ಕರೆದುಕೊಂಡು ಹೋಗಿ ಪೆಟ್ರೊಲ್ ಸುರಿದು ಬೆಂಕಿ ಹಚ್ಚಿ ಕೊಲೆಗಾರರು ಪರಾರಿಯಾಗಿದ್ದಾರೆ.
ಗ್ರಾಮಸ್ಥರು ಘಟನೆಯಿಂದ ಬೆಚ್ಚಿ ಬಿದ್ದಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.